ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ
ಇಸ್ಲಾಮಾಬಾದ್: ಪಾಕಿಸ್ತಾದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಪದಚ್ಯುತಗೊಳ್ಳಲಿದ್ದಾರೆ ಎಂಬ ವದಂತಿಯನ್ನು ಗೃಹ ಸಚಿವ ಮೋನಿಶ್ ನಖ್ವಿ ಗುರುವಾರ ನಿರಾಕರಿಸಿದ್ದಾರೆ.
ಇದು ಕೇವಲ ‘ಅಪಪ್ರಚಾರ’ ಎಂದು ಅವರು ಹೇಳಿದ್ದಾರೆ.
ಜರ್ದಾರಿ ಅವರ ಬದಲಿಗೆ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಅಧ್ಯಕ್ಷರಾಗಲಿದ್ದಾರೆ ಎನ್ನುವ ಸಂದೇಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದರಿಂದ ಅವರು ಈ ಹೇಳಿಕೆ ನೀಡಿದ್ದಾರೆ.
‘ಅಧ್ಯಕ್ಷ ಜರ್ದಾರಿ, ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥರನ್ನು ಗುರಿಯಾಗಿಸಿ ಈ ಅಪಪ್ರಚಾರ ಯಾರು ಮಾಡುತ್ತಿದ್ದಾರೆ ಎಂದು ನಮಗೆ ಸಂಪೂರ್ಣವಾಗಿ ತಿಳಿದಿದೆ’ ಎಂದು ನಖ್ವಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ಆದರೆ, ಅವರು ಯಾವುದೇ ಹೆಸರನ್ನು ಉಲ್ಲೇಖಿಸಿಲ್ಲ.
’ಅಧ್ಯಕ್ಷರ ರಾಜೀನಾಮೆ ಅಥವಾ ಸೇನಾ ಮುಖ್ಯಸ್ಥರು ಅಧ್ಯಕ್ಷರಾಗುವ ಬಗ್ಗೆ ಯಾವುದೇ ಚರ್ಚೆಯಾಗಲಿ, ಅಂತಹ ಆಲೋಚನೆಯಾಗಲಿ ಇಲ್ಲ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ‘ ಎಂದು ನಖ್ವಿ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.