ಇಸ್ಲಾಮಾಬಾದ್: ಕೋವಿಡ್ ಲಸಿಕೆ ಪಡೆದ ಮರುದಿನವೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ.
ಇಮ್ರಾನ್ ಖಾನ್ ಅವರು ಶುಕ್ರವಾರ ಕೋವಿಡ್ ಲಸಿಕೆಯನ್ನು ಪಡೆದಿದ್ದರು. ಆ ನಂತರ ಅವರಲ್ಲಿ ಕೊರೊನಾ ಸೋಂಕಿನ ಗುಣಲಕ್ಷಣಗಳು ಕಂಡುಬಂದಿದ್ದವು. ಇಂದು(ಶನಿವಾರ) ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ ಕೋವಿಡ್ ಇರುವುದು ಬೆಳಕಿಗೆ ಬಂದಿದೆ.
ಪಾಕಿಸ್ತಾನದಲ್ಲಿ ನಡೆಯುತ್ತಿರುವ ಮೊದಲ ಹಂತದ ಕೋವಿಡ್ ಲಸಿಕೆ ಅಭಿಯಾನದ ಭಾಗವಾಗಿ 67 ವರ್ಷದ ಇಮ್ರಾನ್ ಖಾನ್ ಅವರು ಲಸಿಕೆಯನ್ನು ಪಡೆದಿದ್ದರು.
ಇಮ್ರಾನ್ ಖಾನ್ ಅವರಿಗೆ ಕೋವಿಡ್ ಇರುವುದು ಪತ್ತೆಯಾಗಿದೆ. ಅವರೀಗ ತಮ್ಮ ಮನೆಯಲ್ಲಿಯೇ ಪ್ರತ್ಯೇಕವಾಸ ಕೈಗೊಂಡಿದ್ದಾರೆ ಎಂದು ಪಾಕ್ ಆರೋಗ್ಯ ಸಚಿವ ಫೈಸಲ್ ಸುಲ್ತಾನ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.