
ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಉದ್ರಿಕ್ತ ಇಸ್ಲಾಮಿಕ್ ಗುಂಪು ಮತ್ತು ಭದ್ರತಾ ಸಿಬ್ಬಂದಿ ನಡುವೆ ಸೋಮವಾರ ಘರ್ಷಣೆ ನಡೆದಿದ್ದು, ಪೊಲೀಸ್ ಅಧಿಕಾರಿ ಸೇರಿದಂತೆ ಕನಿಷ್ಠ ಐವರು ಮೃತಪಟ್ಟಿದ್ದಾರೆ.
ತೆಹ್ರೀಕ್–ಇ–ಲಬ್ಬೈಕ್ ಪಾಕಿಸ್ತಾನ (ಟಿಎಲ್‌ಪಿ) ಸಂಘಟನೆಯು ಲಾಹೋರ್‌ನಿಂದ ಇಸ್ಲಾಮಾಬಾದ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಗಾಜಾದಲ್ಲಿನ ಜನರಿಗೆ ಬೆಂಬಲ ನೀಡುವಂತೆ ಆಗ್ರಹಿಸುವುದಾಗಿ ಘೋಷಿಸಿತು.
ಲಾಹೋರ್‌ನಿಂದ 40 ಕಿ.ಮೀ. ದೂರದಲ್ಲಿರುವ ಮುರ್ಡಿಕೆ ತಲುಪಿದ ಪ್ರತಿಭಟನಕಾರರನ್ನು ಪೊಲೀಸರು ತಡೆದು, ಮನವೊಲಿಸಲು ಪ್ರಯತ್ನಿಸಿದರು. ಆದರೆ, ಅದು ವಿಫಲವಾಗಿ, ಸಂಘರ್ಷ ಉಂಟಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಅಧಿಕಾರಿ, ಒಬ್ಬ ನಾಗರಿಕರು ಸೇರಿದಂತೆ ಮೂವರು ಪ್ರತಿಭಟನಕಾರರು ಮೃತಪಟ್ಟಿದ್ದು, 48 ಜನರು ಗಾಯಗೊಂಡಿದ್ದಾರೆ. ಪ್ರತಿಭಟನಕಾರರು 40 ಸರ್ಕಾರಿ ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.