ADVERTISEMENT

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಪ್ರವಾಹ: 50 ಸಾವು, 40 ಲಕ್ಷ ಜನರಿಗೆ ತೊಂದರೆ

ಪಿಟಿಐ
Published 6 ಸೆಪ್ಟೆಂಬರ್ 2025, 14:53 IST
Last Updated 6 ಸೆಪ್ಟೆಂಬರ್ 2025, 14:53 IST
<div class="paragraphs"><p>ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಪ್ರವಾಹ </p></div>

ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಪ್ರವಾಹ

   

ಕೃಪೆ: ರಾಯಿಟರ್ಸ್‌

ಲಾಹೋರ್‌: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಗಸ್ಟ್‌ 23ರಿಂದ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹದಿಂದ 50 ಜನರು ಮೃತಪಟ್ಟಿದ್ದು, ಸುಮಾರು 40 ಲಕ್ಷ ಜನರು ತೊಂದರೆಗೆ ಸಿಲುಕಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಪ್ರವಾಹದಲ್ಲಿ ಸಿಲುಕಿದ್ದ 10.84 ಲಕ್ಷ ಜನರನ್ನು ಮತ್ತು 10.34 ಲಕ್ಷ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಪ್ರವಾಹದಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 10 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು’ ಎಂದು ಪಂಜಾಬ್‌ನ ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಪಿಡಿಎಂಎ) ಮಹಾನಿರ್ದೇಶಕ ಇರ್ಫಾನ್‌ ಅಲಿ ಕಥಿಯಾ ತಿಳಿಸಿದ್ದಾರೆ.

ಆಗಸ್ಟ್‌ ಮಧ್ಯಭಾಗದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಬಹುತೇಕ ಎಲ್ಲ ನದಿಗಳು ಮತ್ತು ಉಪನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.