ADVERTISEMENT

ಪಾಕಿಸ್ತಾನದಲ್ಲಿ ಕೋವಿಡ್‌ ಹೆಚ್ಚಳ: ಒಂದೇ ದಿನ 6 ಸಾವಿರಕ್ಕೂ ಅಧಿಕ ಪ್ರಕರಣ

ಪಿಟಿಐ
Published 18 ಏಪ್ರಿಲ್ 2021, 7:44 IST
Last Updated 18 ಏಪ್ರಿಲ್ 2021, 7:44 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ಇಸ್ಲಾಮಾಬಾದ್‌: ಪಾಕಿಸ್ತಾನದಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ಗತಿಯಲ್ಲಿ ಏರುತ್ತಿದ್ದು, ಒಂದೇ ದಿನ 6 ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ ಹಾಗೂ 149 ಮಂದಿ ಮೃತಪಟ್ಟಿದ್ದಾರೆ.

ಕಳೆದ ಜೂನ್‌ 20ರಂದು ಒಂದು ದಿನದಲ್ಲಿ 6,825 ಮಂದಿಗೆ ಕೋವಿಡ್‌ ದೃಢಪಟ್ಟಿತ್ತು, 153 ಮಂದಿ ಮೃತಪಟ್ಟಿದ್ದರು.

ದೇಶದಲ್ಲಿ ಇದುವರೆಗೆ7,56,285 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 16,243 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ ದೇಶದಲ್ಲಿ 13 ಲಕ್ಷ ಮಂದಿಗೆ ಕೋವಿಡ್‌ ಲಸಿಕೆ ಹಾಕಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.