
ಪಾಕ್–ಅಫ್ಗನ್ ಗಡಿಯ ಶೋರಾಬಕ್ ಜಿಲ್ಲೆಯ ಮಝಲ್ ಎಂಬಲ್ಲಿ ತಾಲಿಬಾನ್ ಭದ್ರತಾ ಪಡೆಗಳು ಭಾನುವಾರ ಗಸ್ತು ನಡೆಸಿದವು –
ಇಸ್ಲಾಮಾಬಾದ್: ಅಫ್ಗಾನಿಸ್ತಾನದೊಂದಿಗಿನ ಮುಂದಿನ ಸುತ್ತಿನ ಮಾತುಕತೆ ನವೆಂಬರ್ 6ರಂದು ನಡೆಯಲಿದೆ ಎಂದು ಪಾಕಿಸ್ತಾನ ದೃಢಪಡಿಸಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ತಾಹಿರ್ ಅಂದ್ರಾಬಿ, ‘ನೆರೆಯ ದೇಶದೊಂದಿಗಿನ ಉದ್ವಿಗ್ನತೆಯನ್ನು ಹೆಚ್ಚಿಸಲು ಪಾಕಿಸ್ತಾನ ಬಯಸುವುದಿಲ್ಲ’ ಎಂದು ಹೇಳಿದರು.
‘ಬಿಕ್ಕಟ್ಟು ಬಗೆಹರಿಸಲು ಪಾಕಿಸ್ತಾನವು ಮಾತುಕತೆ ಪ್ರಕ್ರಿಯೆಯನ್ನು ಮುಂದುವರಿಸಲು ಬಯಸುತ್ತದೆ ಮತ್ತು ನವೆಂಬರ್ 6ರ ಮಾತುಕತೆಯಲ್ಲಿ ಸಕಾರಾತ್ಮಕ ಫಲಿತಾಂಶವನ್ನು ನಿರೀಕ್ಷಿಸುತ್ತದೆ’ ಎಂದರು.
ಕಳೆದ ತಿಂಗಳ ಆರಂಭದಲ್ಲಿ ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನ ಸೇನೆಯ ಮಧ್ಯೆ ಸಂಘರ್ಷ ನಡೆದು, ಎರಡೂ ಕಡೆಗಳಲ್ಲಿ ಸಾವು–ನೋವು ಉಂಟಾಗಿತ್ತು. ಆ ಬಳಿಕ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು.
ಉದ್ವಿಗ್ನತೆ ಶಮನಗೊಳಿಸಲು ಅಕ್ಟೋಬರ್ 18 ಮತ್ತು 19ರಂದು ದೋಹಾದಲ್ಲಿ ಮೊದಲ ಸುತ್ತಿನ ಮಾತುಕತೆ ನಡೆದಿತ್ತು. ಎರಡನೇ ಸುತ್ತಿನ ಮಾತುಕತೆ ಇಸ್ತಾಂಬುಲ್‌ನಲ್ಲಿ ಅಕ್ಟೋಬರ್ 25ರಂದು ನಡೆದಿತ್ತು. ಆದರೆ ಗಡಿಯಾಚೆಗಿನ ಭಯೋತ್ಪಾದನೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಮಾತುಕತೆಯಲ್ಲಿ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಾಗಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.