ಇಸ್ಲಾಮಾಬಾದ್: ಭಾರತದ ದಾಳಿಗೆ ತಕ್ಕ ಪ್ರತಿದಾಳಿ ನಡೆಸುವ ಮೂಲಕ ಪಾಕಿಸ್ತಾನ ತನ್ನ ಸಾಮರ್ಥ್ಯವನ್ನು ತೋರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಇಶಾಕ್ ಡರ್ ಸೋಮವಾರ ಹೇಳಿದ್ದಾರೆ.
ಪರಮಾಣು ಸಾಮರ್ಥ್ಯವನ್ನೇ ಮುಂದಿಟ್ಟುಕೊಂಡು ಭಾರತವು ಯುದ್ಧಕ್ಕೆ ಪ್ರಚೋದನೆ ನೀಡಿದರೆ, ಪಾಕಿಸ್ತಾನವು ತಕ್ಕ ಉತ್ತರ ನೀಡಲು ಸಮರ್ಥವಾಗಿದೆ. ಭಾರತವು ಪಾಕಿಸ್ತಾನವನ್ನು ಬೆದರಿಸಲು ಮತ್ತು ಒತ್ತಡ ಹೇರಲು ಸಾಧ್ಯವಿಲ್ಲ ಎಂಬುದು ನಾಲ್ಕು ದಿನಗಳ ಸಂಘರ್ಷದ ಫಲಿತಾಂಶದಿಂದ ಬಯಲಾಗಿದೆ ಎಂದು ಹೇಳಿದ್ದಾರೆ.
ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿ ಪಾಕಿಸ್ತಾನ ತನ್ನ ಹಕ್ಕುಗಳನ್ನು ಭದ್ರಪಡಿಸಿಕೊಳ್ಳುತ್ತಿದೆ. ಅಂತರರಾಷ್ಟ್ರೀಯ ಕಾನೂನು ಮತ್ತು ಒಪ್ಪಂದಗಳನ್ನು ಭಾರತ ಉಲ್ಲಂಘನೆ ಮಾಡುತ್ತಿರುವುದನ್ನು ಜಗತ್ತಿಗೆ ತೋರಿಸಲು ವೇದಿಕೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದೂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.