ADVERTISEMENT

ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಹಿಂದೂ ರೈತನ ಗುಂಡಿಕ್ಕಿ ಹತ್ಯೆ

ಪಿಟಿಐ
Published 11 ಜನವರಿ 2026, 7:58 IST
Last Updated 11 ಜನವರಿ 2026, 7:58 IST
<div class="paragraphs"><p>ಗುಂಡಿಕ್ಕಿ ಕೊಲೆ</p></div>

ಗುಂಡಿಕ್ಕಿ ಕೊಲೆ

   

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಭೂ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ. ಘಟನೆ ಖಂಡಿಸಿ ಹಿಂದೂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೆಲೇಶ್ ಕೊಹ್ಲಿ ಮೃತ ರೈತ. ಶನಿವಾರ ರಾತ್ರಿ ಹೈದರಾಬಾದ್‌ನಲ್ಲಿ ಭೂಮಾಲೀಕ ಸರ್ಫರಾಜ್ ನಿಜಾಮಾನಿ ಮತ್ತು ಅವರ ಸಹಾಯಕ ಜಫರುಲ್ಲಾ ಖಾನ್ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಜನವರಿ 4ರಂದು ಸಿಂಧ್‌ ಪ್ರಾಂತ್ಯದ ಬದಿನ್‌ ಜಿಲ್ಲೆಯ ತಲ್ಹಾರ್ ಗ್ರಾಮದಲ್ಲಿ ನಿಜಾಮಾನಿ ಒಡೆತನದ ಭೂಮಿಯಲ್ಲಿ ಆಶ್ರಯ ತಾಣ ನಿರ್ಮಿಸುತ್ತಿದ್ದ ಆರೋಪದ ಮೇಲೆ ಕೆಲೇಶ್ ಕೊಹ್ಲಿ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಘಟನೆ ಬೆನ್ನಲ್ಲೇ ಆರೋಪಿಗಳು ತಲೆಮರೆಸಿಕೊಂಡಿದ್ದರು. ಕೆಲೇಶ್ ಕೊಹ್ಲಿ ಸಹೋದರ ಕುಮಾರ್ ಕೊಹ್ಲಿ ದಾಖಲಿಸಿದ್ದ ದೂರು ಆಧರಿಸಿ ಹೈದರಾಬಾದ್‌ನ ಫತೇ ಚೌಕ್ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ಮೇಲೆ ನಿರಂತರವಾಗಿ ನಡೆಯುತ್ತಿರುವ ‌‌‌ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿರುವ ಬೆನ್ನಲ್ಲೇ ಪಾಕ್‌ನಲ್ಲಿ ಹಿಂದೂ ವ್ಯಕ್ತಿಯ ಹತ್ಯೆಯಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.