ADVERTISEMENT

ವಿಷ ಕಾರುವ ಪಾಕಿಸ್ತಾನ: ವಿಶ್ವಸಂಸ್ಥೆಯಲ್ಲಿ ಭಾರತ ಕಿಡಿ

ಪಿಟಿಐ
Published 23 ಜನವರಿ 2020, 19:45 IST
Last Updated 23 ಜನವರಿ 2020, 19:45 IST
ವಿಶ್ವಸಂಸ್ಥೆ
ವಿಶ್ವಸಂಸ್ಥೆ   

ವಿಶ್ವಸಂಸ್ಥೆ: ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿಷಯವನ್ನು ಪದೇ ಪದೇ ಪ್ರಸ್ತಾಪಿಸಿರುವುದಕ್ಕೆ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಭಾರತ, ‘ಪಾಕಿಸ್ತಾನವು ಸುಳ್ಳು ಹೇಳಿಕೆಗಳ ಮೂಲಕ ಸದಾ ವಿಷ ಕಾರುತ್ತಿದೆ’ ಎಂದು ಕಿಡಿ ಕಾರಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಭಾರತದ ಕಾಯಂ ಉಪ ಪ್ರತಿನಿಧಿ ಕೆ. ನಾಗರಾಜ್ ನಾಯ್ಡು, ಪಾಕಿಸ್ತಾನದ ವಿರುದ್ಧ ಗುಡುಗಿದ್ದಾರೆ.

‘ವಿಶ್ವಸಂಸ್ಥೆಯ ಪ್ರತಿ ಸಭೆಯಲ್ಲಿಯೂ ಭಾರತದ ವಿರುದ್ಧ ದ್ವೇಷಪೂರಿತ ಭಾಷಣ ಮಾಡುತ್ತದೆ. ಜತೆಗೆ, ಅಂತರರಾಷ್ಟ್ರೀಯ ವೇದಿಕೆಗಳಲ್ಲಿಯೂ ಭಾರತದ ವಿರುದ್ಧ ವಿಷ ಹಾಗೂ ಸುಳ್ಳು ನಿರೂಪಣೆಗಳನ್ನೇ ಹರಡಲು ಯತ್ನಿಸುತ್ತಿದೆ. ಆದರೂ ಬೇರೆ ರಾಷ್ಟ್ರಗಳ ಬೆಂಬಲ ಪಡೆಯುವಲ್ಲಿ ವಿಫಲವಾಗಿದೆ’ ಎಂದು ಟೀಕಿಸಿದ್ದಾರೆ.

ADVERTISEMENT

ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಪಾಕಿಸ್ತಾನದ ರಾಜತಾಂತ್ರಿಕ ಸಾದ್‌ ಅಹಮದ್‌ ವಾರೈಚ್‌ ಕಾಶ್ಮೀರ ವಿವಾದ ಪ್ರಸ್ತಾಪಿಸಿದ್ದಕ್ಕೆ ನಾಯ್ಡು ಈ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.