ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದ ಹೈಕಮಿಷನ್ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆಯಿಸಿಕೊಂಡು ಗುರುವಾರ ಪ್ರತಿಭಟನೆ ದಾಖಲಿಸಿದೆ.
ಕಳೆದ ಬುಧವಾರ ಭಾರತೀಯ ಪಡೆಗಳು ಬಾಕ್ಸರ್ ವಲಯದಲ್ಲಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪಾಕ್ ವಿದೇಶಾಂಗ ಕಚೇರಿ ತಿಳಿಸಿದೆ.
2003ರ ಕದನ ವಿರಾಮ ಒಪ್ಪಂದವನ್ನು ಗೌರವಿಸಬೇಕು. ಮೇಲಿಂದ ಮೇಲೆ ನಡೆಯುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯ ಬಗ್ಗೆ ತನಿಖೆ ನಡೆಸಬೇಕು ಎಂದು ವಿದೇಶಾಂಗ ಕಚೇರಿ ಒತ್ತಾಯಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.