ADVERTISEMENT

ಕದನ ವಿರಾಮ ಉಲ್ಲಂಘನೆ: ಪಾಕ್‌ ಆಕ್ಷೇಪ

ಪಿಟಿಐ
Published 13 ಸೆಪ್ಟೆಂಬರ್ 2020, 11:08 IST
Last Updated 13 ಸೆಪ್ಟೆಂಬರ್ 2020, 11:08 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಇಸ್ಲಾಮಾಬಾದ್:ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಪಾಕಿಸ್ತಾನವು ಭಾರತದ ಹೈ ಕಮಿಷನ್‌ನ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಭಾನುವಾರ ಕರೆಯಿಸಿಕೊಂಡು ಪ್ರತಿಭಟನೆ ದಾಖಲಿಸಿದೆ.

ಭಾರತೀಯ ಸೇನೆಯುರಾಖ್ಚಿಕ್ರಿ ವಲಯದಲ್ಲಿ ಶನಿವಾರ ರಾತ್ರಿ ಅಪ್ರಚೋದಿತ ದಾಳಿ ನಡೆಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವಾಲಯವು ಹೇಳಿಕೆ ಬಿಡುಗಡೆ ಮಾಡಿದೆ.

‘ಭಾರತೀಯ ಸೇನೆಯು ಗಡಿ ನಿಯಂತ್ರಣ ರೇಖೆ ಬಳಿ ಇರುವ ಗ್ರಾಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಈ ವರ್ಷ ಭಾರತವು 2,225 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಇದರಲ್ಲಿ 18 ಮಂದಿ ಮೃತಪಟ್ಟಿದ್ದಾರೆ’ ಎಂದು ಪಾಕಿಸ್ತಾನ ಆರೋಪಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.