ADVERTISEMENT

ಪಾಕಿಸ್ತಾನ: ಮೂವರು ಉಗ್ರರ ಹತ್ಯೆ

ಪಿಟಿಐ
Published 17 ಸೆಪ್ಟೆಂಬರ್ 2025, 12:36 IST
Last Updated 17 ಸೆಪ್ಟೆಂಬರ್ 2025, 12:36 IST
---
---   

ಪೇಶಾವರ್: ನೈರುತ್ಯ ಪಾಕಿಸ್ತಾನದ ಖೈಬರ್‌ ಪಖ್ತುಂಕ್ವ ಪ್ರಾಂತ್ಯದಲ್ಲಿ ಎರಡು ಪ್ರತ್ಯೇಕ ದಾಳಿಗಳಲ್ಲಿ ಕನಿಷ್ಠ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬನ್ನು ಮತ್ತು ಕಾರಕ್‌ ಜಿಲ್ಲೆಗಳ ಎರಡು ಪೊಲೀಸ್ ಠಾಣೆಗಳ ಮೇಲೆ ಮಂಗಳವಾರ ಉಗ್ರರು ನಡೆಸಿದ್ದ ದಾಳಿಯನ್ನು ವಿಫಲಗೊಳಿಸಿ, ಮೂವರನ್ನು ಹೊಡೆದುರುಳಿಸಲಾಗಿದೆ ಎಂದು ಪ್ರಾದೇಶಿಕ ಪೊಲೀಸ್ ಅಧಿಕಾರಿ ಸಜ್ಜದ್ ಖಾನ್‌ ಮಾಹಿತಿ ನೀಡಿದ್ದಾರೆ.

ಡಜನ್‌ಗೂ ಹೆಚ್ಚು ಭಯೋತ್ಪಾದಕರು ಭಾರಿ ಶಸ್ತ್ರಾಸ್ತ್ರಗಳ ಸಮೇತ ಮಜಾಂಗ್‌ ತಪಾಸಣಾ ಠಾಣೆಯನ್ನು ಗುರಿಯಾಗಿಸಿ ದಾಳಿ ಮಾಡಿದ್ದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ಪೊಲೀಸರು ಗಾಯಗೊಂಡರು ಎಂದು ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಕಾರಕ್‌ನ ಗುರ್ಗುರಿ ಪೊಲೀಸ್ ಠಾಣೆಗೆ ನುಗ್ಗುತ್ತಿದ್ದ ಉಗ್ರರನ್ನು ಭದ್ರತಾ ಪಡೆಗಳು ತಡೆದು ಪ್ರತಿದಾಳಿ ನಡೆಸಿದವು. ಎರಡೂ ಕಡೆ ಗುಂಡಿನ ಚಕಮಕಿ ನಡೆಯಿತು ಎಂದು ಜಿಲ್ಲಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.