ADVERTISEMENT

IWT | ವಿಶ್ವಸಂಸ್ಥೆಯಲ್ಲಿ ಪಾಕ್‌ ತಪ್ಪು ಮಾಹಿತಿ: ಭಾರತ ತಕ್ಕ ಪ್ರತ್ಯುತ್ತರ

ಪಿಟಿಐ
Published 24 ಮೇ 2025, 14:39 IST
Last Updated 24 ಮೇ 2025, 14:39 IST
ಸಿಂಧೂ ನದಿ
ಸಿಂಧೂ ನದಿ    

ವಿಶ್ವಸಂಸ್ಥೆ: ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ (ಐಡಬ್ಲ್ಯುಟಿ) ಬಗ್ಗೆ ಪಾಕಿಸ್ತಾನದ ‘ತಪ್ಪು ಮಾಹಿತಿ’ಗೆ ಭಾರತವು ವಿಶ್ವಸಂಸ್ಥೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಿದೆ.

ಭಾರತದ ಮೇಲೆ ಮೂರು ಯುದ್ಧಗಳು ಮತ್ತು ಸಾವಿರಾರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಪಾಕಿಸ್ತಾನವು ಈ ಒಪ್ಪಂದದ ಆಶಯವನ್ನು ಉಲ್ಲಂಘಿಸಿದೆ ಎಂದು ಭಾರತ ಪ್ರತಿಪಾದಿಸಿದೆ.

‘ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ನಿಯೋಗ ನಡೆಸುತ್ತಿರುವ ತಪ್ಪು ಮಾಹಿತಿಗೆ ನಾವು ಪ್ರತಿಕ್ರಿಯೆ ನೀಡಲು ನಿರ್ಬಂಧಿತರಾಗಿದ್ದೇವೆ. ಈ ಒಪ್ಪಂದದ ವಿಷಯದಲ್ಲಿ ಭಾರತವು ಯಾವಾಗಲೂ ಜವಾಬ್ದಾರಿಯುತ ರೀತಿಯಲ್ಲಿ ವರ್ತಿಸಿದೆ’ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಪರ್ವತನೇನಿ ಹರೀಶ್‌ ಶುಕ್ರವಾರ ಹೇಳಿದ್ದಾರೆ.

ADVERTISEMENT

'ಸಶಸ್ತ್ರ ಸಂಘರ್ಷದ ಸಮಯದಲ್ಲಿ ನೀರು– ನಾಗರಿಕ ಜೀವಗಳ ರಕ್ಷಣೆ' ಕುರಿತು ವಿಶ್ವಸಂಸ್ಥೆಯಲ್ಲಿ ಸ್ಲೊವೇನಿಯಾ ಆಯೋಜಿಸಿದ್ದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. 

‘ಭಾರತವು ಪಾಕಿಸ್ತಾನದ ಜತೆ 65 ವರ್ಷಗಳ ಹಿಂದೆ ಸಿಂಧೂ ಜಲ ಒಪ್ಪಂದವನ್ನು ಪ್ರಾಮಾಣಿಕತೆಯಿಂದ ಮಾಡಿಕೊಂಡಿತ್ತು. ಆದರೆ, ಯುದ್ಧ ಮತ್ತು ಭಯೋತ್ಪಾದಕ ದಾಳಿ ನಡೆಸುವ ಮೂಲಕ ಪಾಕಿಸ್ತಾನವು ಈ ಒಪ್ಪಂದದ ಆಶಯವನ್ನು ಉಲ್ಲಂಘಿಸಿದೆ’ ಎಂದು ಅವರು ಸಭೆಗೆ ತಿಳಿಸಿದ್ದಾರೆ.

‘ಕಳೆದ ನಾಲ್ಕು ದಶಕಗಳಲ್ಲಿ ಭಾರತದಲ್ಲಿ ನಡೆದ ಭಯೋತ್ಪಾದಕ ದಾಳಿಗಳಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದರೂ, ಭಾರತವು ಈ ಅವಧಿಯುದ್ದಕ್ಕೂ ಅಸಾಧಾರಣ ತಾಳ್ಮೆ ಮತ್ತು ಹೃದಯವೈಶಾಲ್ಯ ತೋರಿಸಿದೆ’ ಎಂದಿದ್ದಾರೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಸಿಂಧೂ ಜಲ ಒಪ್ಪಂದವನ್ನು ಅಮಾನತಿನಲ್ಲಿರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.