ADVERTISEMENT

ಪಾಕಿಸ್ತಾನ ಚುನಾವಣೆ ಫಲಿತಾಂಶ ಪ್ರಶ್ನಿಸಿ ನ್ಯಾಯಾಲಯಗಳಲ್ಲಿ ವ್ಯಾಪಕ ಅರ್ಜಿ

ಪಿಟಿಐ
Published 11 ಫೆಬ್ರುವರಿ 2024, 9:19 IST
Last Updated 11 ಫೆಬ್ರುವರಿ 2024, 9:19 IST
<div class="paragraphs"><p>ಚುನಾವಣಾ ಫಲಿತಾಂಶ ತಿರುಚಲಾಗಿದೆ ಎಂದು ಆರೋಪಿಸಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳಿಂದ ಪ್ರತಿಭಟನೆ</p></div>

ಚುನಾವಣಾ ಫಲಿತಾಂಶ ತಿರುಚಲಾಗಿದೆ ಎಂದು ಆರೋಪಿಸಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳಿಂದ ಪ್ರತಿಭಟನೆ

   

ರಾಯಿಟರ್ಸ್‌

ಇಸ್ಲಾಮಾಬಾದ್‌: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ನೇತೃತ್ವದ ಪಾಕಿಸ್ತಾನ ತೆಹ್ರೀಕ್‌–ಇ–ಇನ್ಸಾಫ್‌ (ಪಿಟಿಐ) ಪಕ್ಷದ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು, ಸಾರ್ವತ್ರಿಕ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ವಿವಿಧ ಹೈಕೋರ್ಟ್‌ಗಳಿಗೆ ಅರ್ಜಿಗಳ ಮಹಾಪೂರವನ್ನೇ ಸಲ್ಲಿಸಿದ್ದಾರೆ.

ADVERTISEMENT

ರಾತ್ರೋರಾತ್ರಿ ಫಲಿತಾಂಶ ತಿರುಚಿದ್ದಲ್ಲದೆ, ಕ್ಷೇತ್ರದ ಮತ ಎಣಿಕೆ ವೇಳೆ ಪ್ರಕ್ರಿಯೆಗಳನ್ನು ಪಾಲನೆ ಮಾಡಿಲ್ಲ ಎಂಬುವುದು ಇವರ ಆರೋಪವಾಗಿದೆ.

ಲಾಹೋರ್ ಹೈಕೋರ್ಟ್‌ನಲ್ಲಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಇಸ್ಲಾಮಾಬಾದ್‌ ಹೈಕೋರ್ಟ್‌ನಲ್ಲಿ ಎರಡು ಅರ್ಜಿಗಳು ಸಲ್ಲಿಕೆಯಾಗಿದ್ದು, ಸಿಂಧ್‌ ಹೈಕೋರ್ಟ್‌ನಲ್ಲಿ ಕನಿಷ್ಠ ಮೂರು ಅರ್ಜಿಗಳು ಸಲ್ಲಿಕೆಯಾಗಿವೆ.

ಪಾಕಿಸ್ತಾನ ನ್ಯಾಷನಲ್ ಅಸೆಂಬ್ಲಿಯ 265 ಕ್ಷೇತ್ರಗಳ ಪೈಕಿ 259 ಸ್ಥಾನಗಳ ಫಲಿತಾಂಶವನ್ನು ಚುನಾವಣಾ ಆಯೋಗ ಪ್ರಕಟಿಸಿದ್ದು, ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳು 102 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ ಎನ್ನಲಾಗಿದೆ. ಪಾಕಿಸ್ತಾನ್‌ ಮುಸ್ಲಿಂ ಲೀಗ್‌–ನವಾಜ್‌ (ಪಿಎಂಎಲ್‌–ಎನ್‌) 74, ಪಾಕಿಸ್ತಾನ್‌ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳಲ್ಲಿ, ಮುತ್ತಾಹಿದಾ ಕ್ವಾಮಿ ಮೂವ್‌ಮೆಂಟ್‌ (ಎಂಕ್ಯುಎಂ) 17 ಹಾಗೂ ಇತರೆ ಸಣ್ಣ ಪಕ್ಷಗಳು 12 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಪಿಎಂಎಲ್‌–ಎನ್‌ನ ವರಿಷ್ಠ ನವಾಜ್ ಷರೀಫ್ ಹಾಗೂ ಅವರ ಪುತ್ರಿ ಮರಿಯಮ್ ನವಾಜ್ ಹಾಗೂ ಐಪಿಪಿ ಅಧ್ಯಕ್ಷ ಅಲೀಮ್‌ ಖಾನ್ ಅವರ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗ ಇನ್ನೂ ಪೂರ್ಣ ಫಲಿತಾಂಶವನ್ನು ಪ್ರಕಟಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.