ADVERTISEMENT

ಧರ್ಮ ನಿಂದನೆ ಆರೋಪ: ಪಾಕ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಪ್ರತಿಭಟನೆ

ರಾಯಿಟರ್ಸ್
Published 23 ಫೆಬ್ರುವರಿ 2024, 14:16 IST
Last Updated 23 ಫೆಬ್ರುವರಿ 2024, 14:16 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಇಸ್ಲಾಮಾಬಾದ್‌: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಧರ್ಮನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿವಿಧ ಧಾರ್ಮಿಕ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಬೆಂಬಲಿಗರು ಪಾಕಿಸ್ತಾನದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ತೆಹ್ರೀಕ್-ಎ-ಲಬ್ಬೈಕ್ ಪಾಕಿಸ್ತಾನ್ (ಟಿಎಲ್‌ಪಿ) ನೇತೃತ್ವದಲ್ಲಿ ವಿವಿಧ ಧಾರ್ಮಿಕ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಪ್ರತಿಭಟನೆಗೆ ಕರೆ ನೀಡಿದ್ದವು.

ADVERTISEMENT

ಧರ್ಮ ನಿಂದನೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಲ್ಪಸಂಖ್ಯಾತ ಅಹಮದಿ ಸಮುದಾಯದ ವ್ಯಕ್ತಿಯೊಬ್ಬರಿಗೆ ಜಾಮೀನು ಮಂಜೂರು ಮಾಡುವ ಮೂಲಕ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಖಾಜಿ ಫಯಾಜ್‌ ಇಸಾ ಅವರು ಧರ್ಮ ನಿಂದನೆ ಮಾಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಅಹಮದಿ ಸಮುದಾಯದ ವ್ಯಕ್ತಿಗೆ ನ್ಯಾಯಾಲಯವು ಈಚೆಗೆ ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.