ತಿಯಾನ್‌ಜಿನ್: ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಶೃಂಗಸಭೆಯ ವೇಳೆ ಪಾಕಿಸ್ತಾನದ ಪ್ರಧಾನ ಮಂತ್ರಿ ಶೆಹಬಾಜ್ ಶರೀಫ್ ಟ್ರೋಲ್‌ಗೆ ಗುರಿಯಾಗಿದ್ದಾರೆ.
ಈ ಸಂಬಂಧ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಸುದ್ದಿ ಸಂಸ್ಥೆ 'ಎಎನ್‌ಐ' ಸಹ ವಿಡಿಯೊ ಹಂಚಿಕೊಂಡಿದೆ.
ಎಸ್‌ಸಿಒ ನಾಯಕರ ಫ್ಯಾಮಿಲಿ ಫೋಟೊ ಚಿತ್ರೀಕರಣದ ಸಂದರ್ಭದಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿಯಾಗಲು ಪಾಕ್ ಪ್ರಧಾನಿ ತಡಕಾಡುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಬಳಿಕ ರಷ್ಯಾ ಅಧ್ಯಕ್ಷರನ್ನು ಹಿಂಬಾಲಿಸುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.
ಮಗದೊಂದು ವಿಡಿಯೊದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪರಸ್ಪರ ಸಂಭಾಷಣೆ ನಡೆಸುತ್ತ ಮುಂದೆ ಸಾಗುತ್ತಿರುವಾಗ ಬದಿಯಲ್ಲಿ ನಿಂತಿರುವ ಶೆಹಬಾಜ್ ಶರೀಫ್ ನೋಡುತ್ತಿರುವ ದೃಶ್ಯವೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.
ಪಹಲ್ಗಾಮ್ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ವಿರುದ್ಧ ಭಾರತ 'ಆಪರೇಷನ್ ಸಿಂಧೂರ' ಹೆಸರಿನ ಮಿಲಿಟರಿ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಪಾಕ್‌ನೊಂದಿಗಿನ ರಾಜತಾಂತ್ರಿಕ ಬಾಂಧವ್ಯವನ್ನು ಸಂಪೂರ್ಣವಾಗಿ ಕಡಿದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.