ADVERTISEMENT

ಡಾಲರ್‌ ಎದುರು ಪಾಕಿಸ್ತಾನ ರೂಪಾಯಿ ಮೌಲ್ಯ 296.93ಕ್ಕೆ ಕುಸಿತ!

ರಾಯಿಟರ್ಸ್‌
Published 11 ಮೇ 2023, 11:12 IST
Last Updated 11 ಮೇ 2023, 11:12 IST
ಅಮೆರಿಕ ಡಾಲರ್‌
ಅಮೆರಿಕ ಡಾಲರ್‌   

ಕರಾಚಿ: ಅಮೆರಿಕ ಡಾಲರ್‌ ಎದುರು ಪಾಕಿಸ್ತಾನದ ರೂಪಾಯಿ ಸಾರ್ವಕಾಲಿಕ ಕನಿಷ್ಠ ಮಟ್ಟ 296.93ಕ್ಕೆ (ಶೇ. 2.9ರಷ್ಟು) ಕುಸಿದಿದೆ.

ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಮಂಗಳವಾರ ಇಸ್ಲಾಮಾಬಾದ್‌ನಲ್ಲಿ ಬಂಧಿಸಲಾಯಿತು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದು ಪಾಕಿಸ್ತಾನಿ ರೂಪಾಯಿಯ ಮೇಲೆ ಋಣಾತ್ಮಕ ಪರಿಣಾಮ ಬೀರಿದೆ.

ಇಮ್ರಾನ್‌ ಖಾನ್‌ ಬಂಧನ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಈವರೆಗೆ ಒಂದು ಸಾವು ಸಂಭವಿಸಿದೆ. ಪ್ರತಿಭಟನೆಗಳ ಹಿನ್ನೆಲೆಯಲ್ಲಿ ದೇಶದ ಆಂತರಿಕ ಸಚಿವಾಲಯವು ಮೊಬೈಲ್‌ ಬ್ರಾಡ್‌ ಬ್ಯಾಂಡ್‌ ಸೇವೆಯನ್ನು ಸ್ಥಗಿತಗೊಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.