ADVERTISEMENT

ಪಾಕ್‌ ಪ್ರವಾಹ: ₹ 3 ಲಕ್ಷ ಕೋಟಿ ಆರ್ಥಿಕ ನಷ್ಟ

ಪಿಟಿಐ
Published 13 ಸೆಪ್ಟೆಂಬರ್ 2022, 14:34 IST
Last Updated 13 ಸೆಪ್ಟೆಂಬರ್ 2022, 14:34 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾರಿ ಪ್ರವಾಹದಿಂದಾಗಿ ಸುಮಾರು ₹ 3 ಲಕ್ಷ ಕೋಟಿಯಷ್ಟು ಆರ್ಥಿಕ ನಷ್ಟವುಂಟಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ.

ಕಳೆದ ವಾರ ಪಾಕಿಸ್ತಾನದ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರು ಸುಮಾರು ₹ 2 ಲಕ್ಷ ಕೋಟಿಯಷ್ಟು ಹಾನಿ ಸಂಭವಿಸಿರಬಹುದೆಂದು ಅಂದಾಜಿಸಿದ್ದರು. ಆದರೆ, ಅವರು ಅಂದಾಜಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆರ್ಥಿಕ ನಷ್ಟವುಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಲ್ಲುಂಟಾದ ನಷ್ಟದ ಅಂದಾಜು ಕುರಿತು ಚರ್ಚಿಸಲು ಸೋಮವಾರ ನಡೆದ ರಾಷ್ಟ್ರೀಯ ಪ್ರವಾಹ ಪ್ರತಿಕ್ರಿಯೆ ಕೇಂದ್ರ (ಎನ್‌ಎಫ್‌ಆರ್‌ಸಿಸಿ) ಸಭೆಯಲ್ಲಿ ಪ್ರವಾಹದಿಂದಾಗಿ ಪಾಕಿಸ್ತಾನ ಆರ್ಥಿಕ ಪರಿಸ್ಥಿತಿ ಮೇಲೆ ಸುಮಾರು ₹ 3 ಲಕ್ಷ ಕೋಟಿಯಷ್ಟು ನಷ್ಟವುಂಟಾಗಿದೆ ಎಂದುಹಣಕಾಸು ಸಚಿವಾಲಯವು ತಿಳಿಸಿದೆ ಎಂದು ‘ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನಲ್’ ವರದಿ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.