ADVERTISEMENT

ಪಾಕ್‌: ಇಮ್ರಾನ್ ಖಾನ್ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಪ್ರಕರಣ

ಪಿಟಿಐ
Published 21 ಆಗಸ್ಟ್ 2022, 18:19 IST
Last Updated 21 ಆಗಸ್ಟ್ 2022, 18:19 IST
   

ಇಸ್ಲಾಮಾಬಾದ್: ಇಸ್ಲಾಮಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಪೊಲೀಸ್‌, ನ್ಯಾಯಾಂಗ ಮತ್ತು ಇತರ ಸಂಸ್ಥೆಗಳಿಗೆ ಬೆದರಿಕೆ ಒಡ್ಡಿದ ಆರೋಪದ ಮೇರೆಗೆ ಅವರ ವಿರುದ್ಧ ಭಾನುವಾರ ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ (ಎಟಿಎ) ಪ್ರಕರಣ ದಾಖಲಾಗಿದೆ.

ಇಸ್ಲಾಮಾಬಾದ್‌ನ ಮರ್ಗಲ್ಲಾ ಪೊಲೀಸ್ ಠಾಣೆಯಲ್ಲಿ ಶನಿವಾರ ರಾತ್ರಿ ಎಫ್‌ಐಆರ್ ದಾಖಲಾಗಿದೆ. ‘ಇಮ್ರಾನ್ ತಮ್ಮ ಭಾಷಣದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು, ಮಹಿಳಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಎಫ್‌–9 ಪಾರ್ಕ್‌ನಲ್ಲಿ ಶನಿವಾರ ನಡೆದ ರ‍್ಯಾಲಿಯಲ್ಲಿ ಇಮ್ರಾನ್ ಪ್ರಚೋದನಕಾರಿ ಭಾಷಣ ಮಾಡಿರುವ ಕುರಿತು ಪ್ರಕರಣ ದಾಖಲಿಸಲು ಸರ್ಕಾರವು ಚಿಂತನೆ ನಡೆಸುತ್ತಿದೆ ಎಂದು ಆಂತರಿಕ ಸಚಿವ ರಾಣಾ ಸನಾವುಲ್ಲಾ ಅವರು ಹೇಳಿದ ಕೆಲವೇ ಗಂಟೆಗಳಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.