ADVERTISEMENT

ಪಾಕ್: ಪಂಜಾಬ್, ಖೈಬರ್ ಪ್ರಾಂತ್ಯಗಳಲ್ಲಿ ಚುನಾವಣೆಗೆ ಆದೇಶಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 1 ಮಾರ್ಚ್ 2023, 11:40 IST
Last Updated 1 ಮಾರ್ಚ್ 2023, 11:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಇಸ್ಲಾಮಾಬಾದ್‌: ಪಂಜಾಬ್‌ ಹಾಗೂ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯಗಳಲ್ಲಿ 90 ದಿನಗಳ ಅವಧಿಯೊಳಗೆ ಚುನಾವಣೆ ನಡೆಸುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್‌ ಬುಧವಾರ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಪಾಕಿಸ್ತಾನದ ಪದಚ್ಯುತ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷವು ದೇಶದಲ್ಲಿ ಅವಧಿಗೆ ಮುನ್ನವೇ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಒತ್ತಾಯಿಸುವ ಪ್ರಯತ್ನದ ಭಾಗವಾಗಿ ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾ ವಿಧಾನಸಭೆಯನ್ನು ಅನುಕ್ರಮವಾಗಿ ಜನವರಿ 14 ಮತ್ತು 18ರಂದು ವಿಸರ್ಜಿಸಿತ್ತು.

ಪಂಜಾಬ್‌ ಹಾಗೂ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯಗಳ ಚುನಾವಣೆ ದಿನಾಂಕಗಳ ಘೋಷಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್‌ ಕಳೆದ ವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ADVERTISEMENT

ಮುಖ್ಯ ನ್ಯಾಯಮೂರ್ತಿ ಉಮರ್‌ ಅತಾ ಬಂಡಿಯಲ್‌ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ಬುಧವಾರ ಸ್ವಯಂ ಪ್ರೇರಿತ ದೂರಿನ ವಿಚಾರಣೆ ನಡೆಸಿ, ಭಿನ್ನಮತದ ತೀರ್ಪನ್ನು ನೀಡಿತು. 90 ದಿನಗಳೊಳಗಾಗಿ ಚುನಾವಣೆ ನಡೆಸಬೇಕೆಂಬ ನಿರ್ಧಾರವನ್ನು ಮೂವರು ನ್ಯಾಯಮೂರ್ತಿಗಳು ಅಂಗೀಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.