ADVERTISEMENT

ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಹಮಾಸ್‌ಗೆ ಕರೆ ನೀಡಿದ ಪ್ಯಾಲೆಸ್ಟೀನ್ ಅಧ್ಯಕ್ಷ

ಏಜೆನ್ಸೀಸ್
Published 23 ಸೆಪ್ಟೆಂಬರ್ 2025, 2:42 IST
Last Updated 23 ಸೆಪ್ಟೆಂಬರ್ 2025, 2:42 IST
<div class="paragraphs"><p>ಮಹಮೂದ್‌ ಅಬ್ಬಾಸ್‌</p></div>

ಮಹಮೂದ್‌ ಅಬ್ಬಾಸ್‌

   

ಜೆರುಸಲೇಂ: ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಹಮಾಸ್‌ ಬಂಡುಕೋರರಿಗೆ ಪ್ಯಾಲೆಸ್ಟೀನ್‌ ಪ್ರಾಧಿಕಾರದ ಅಧ್ಯಕ್ಷ ಮಹಮೂದ್‌ ಅಬ್ಬಾಸ್‌ ಕರೆ ನೀಡಿದ್ದಾರೆ ಎಂದು ವರದಿಯಾಗಿದೆ.

‘ಗಾಜಾ ಆಡಳಿತದಲ್ಲಿ ಹಮಾಸ್‌ ಬಂಡುಕೋರರು ಯಾವುದೇ ಪಾತ್ರವನ್ನು ಹೊಂದಿರುವುದಿಲ್ಲ. ಹಾಗಾಗಿ ಹಮಾಸ್ ಮತ್ತು ಇತರ ಬಣಗಳು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಕೂಡಲೇ ಹಿಂದಿರುಗಿಸಬೇಕು’ ಎಂದು ಅಬ್ಬಾಸ್‌ ಹೇಳಿದ್ದಾರೆ.

ADVERTISEMENT

ಅಮೆರಿಕದ ತೀವ್ರ ವಿರೋಧದ ಮಧ್ಯೆಯೂ ಬ್ರಿಟನ್‌ ಸರ್ಕಾರವು ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡಲು ಮುಂದಾಗಿದೆ. ಗಾಜಾದಲ್ಲಿ ನಡೆಸುತ್ತಿರುವ ಯುದ್ಧ ಸಂಬಂಧ ಇಸ್ರೇಲ್‌ಗೆ ಬ್ರಿಟನ್‌ ಸರ್ಕಾರವು ಕೆಲವು ನಿಬಂಧನೆಗಳನ್ನು ಹಾಕಿತ್ತು. ಇದನ್ನು ಪಾಲಿಸಿಲ್ಲ ಎನ್ನುವ ಕಾರಣಕ್ಕೆ ಈ ನಿರ್ಧಾರಕ್ಕೆ ಬ್ರಿಟನ್‌ ಮುಂದಾಗಿದೆ.

ಸೋಮವಾರದಿಂದ (ಸೆ. 22) ವಿಶ್ವಸಂಸ್ಥೆಯ 80ನೇ ಸಾಮಾನ್ಯ ಸಭೆ ಆರಂಭವಾಗಿದೆ. ಗಾಜಾದಲ್ಲಿ ನಡೆಯುತ್ತಿರುವ ಯುದ್ಧ, ಪ್ಯಾಲೆಸ್ಟೀನ್‌ಗೆ ದೇಶದ ಮಾನ್ಯತೆ ನೀಡುವ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬ್ರಿಟನ್‌, ಫ್ರಾನ್ಸ್‌, ಕೆನಡಾ, ಆಸ್ಟ್ರೇಲಿಯಾ, ಪೋರ್ಚುಗಲ್‌ ಸೇರಿದಂತೆ ಸುಮಾರು 140 ದೇಶಗಳು ಪ್ಯಾಲೆಸ್ಟೀನ್‌ ಅನ್ನು ಪ್ರತ್ಯೇಕ ದೇಶವನ್ನಾಗಿ ‍ಪರಿಗಣಿಸಲು ಮುಂದಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.