(ಚಿತ್ರ ಕೃಪೆ: X/@sentdefender)
ವಾಷಿಂಗ್ಟನ್: ಅಮೆರಿಕದ ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿರುವ ಪ್ರಯಾಣಿಕ ಜೆಟ್ ವಿಮಾನ ನದಿಗೆ ಪತನಗೊಂಡಿದೆ ಎಂದು ವರದಿಯಾಗಿದೆ.
ವಾಷಿಂಗ್ಟನ್‌ನ ರೊನಾಲ್ಡ್ ರೇಗನ್ ನ್ಯಾಷನಲ್ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಜೆ ಲ್ಯಾಂಡಿಂಗ್ ವೇಳೆ ಈ ದುರ್ಘಟನೆ ಸಂಭವಿಸಿದೆ.
ಪೊಟೊಮ್ಯಾಕ್ ನದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಹಲವರು ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.
ಅವಘಡದ ಬೆನ್ನಲ್ಲೇ ವಾಷಿಂಗ್ಟನ್ ಸಮೀಪದಲ್ಲಿ ಎಲ್ಲ ವಿಮಾನಗಳ ಹಾರಾಟ ಮತ್ತು ಲ್ಯಾಂಡಿಂಗ್ ಸ್ಧಗಿತಗೊಳಿಸಲಾಗಿದೆ.
ಜೆಟ್ ವಿಮಾನದಲ್ಲಿ 60 ಮಂದಿ ಪ್ರಯಾಣಿಕರು ಮತ್ತು ನಾಲ್ವರು ಸಿಬ್ಬಂದಿ ಇದ್ದರು ಎಂದು ಅಮೆರಿಕನ್ ಏರ್‌ಲೈನ್ಸ್ ಖಚಿತಪಡಿಸಿದೆ.
ಅಮೆರಿಕ ಸೇನೆಯ ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್‌ನಲ್ಲಿ ಮೂವರು ಸೇನಾ ಸಿಬ್ಬಂದಿ ಇದ್ದರು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.