ನ್ಯೂಯಾರ್ಕ್(ಪಿಟಿಐ):ಅಮೆರಿಕದ ಷಿಕಾಗೊದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿಯುವಾಗ ಪ್ರಯಾಣಿಕರೊಬ್ಬರು ವಿಮಾನದ ತುರ್ತು ಬಾಗಿಲು ತೆರೆದು ಅದರ ರೆಕ್ಕೆ ಮೇಲೆ ಹತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ಯಾಲಿಫೋರ್ನಿಯಾ ಮೂಲದ ಪ್ರಯಾಣಿಕ ರ್ಯಾಂಡಿ ಫ್ರಾಂಕ್ ಡವಿಲಾ(57) ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾಂಡಿಯಾಗೊ ವಿಮಾನ ನಿಲ್ದಾಣದಿಂದ ಪ್ರಯಾಣಿಕರ ಯುನೈಟೆಡ್ ಏರ್ಲೈನ್ಸ್ ವಿಮಾನವು ಷಿಕಾಗೊ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿತ್ತು. ಈ ವೇಳೆ ಪ್ರಯಾಣಿಕ ವಿಮಾನದ ತುರ್ತು ಬಾಗಿಲನ್ನು ಹಿಡಿದು ಎಳೆದು, ರೆಕ್ಕೆಯ ಮೇಲೆ ಹತ್ತಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.