ADVERTISEMENT

ಬಾಂಗ್ಲಾದೇಶ | ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ: ಅಮೆರಿಕ ಕಳವಳ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2024, 15:22 IST
Last Updated 5 ಡಿಸೆಂಬರ್ 2024, 15:22 IST
<div class="paragraphs"><p>ಅಮೆರಿಕ ಧ್ವಜ </p></div>

ಅಮೆರಿಕ ಧ್ವಜ

   

ಸಾಂದರ್ಭಿಕ ಚಿತ್ರ

ಇಂದೋರ್‌: ‘ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಿಗೆ ಹಿಂಸೆ ನೀಡುತ್ತಿರುವುದು ಕಳವಳಕಾರಿ. ಪ್ರತಿಯೊಬ್ಬ ವ್ಯಕ್ತಿಯು ತನ್ನ ಧರ್ಮ ಮತ್ತು ನಂಬಿಕೆಗೆ ಅನುಗುಣವಾಗಿ, ಸ್ವತಂತ್ರವಾಗಿ ಜೀವನ ನಡೆಸಲು ಎಲ್ಲಾ ಪಾಲುದಾರರ ನಡುವೆ ಮಾತುಕತೆ ನಡೆಯಬೇಕಾದ ಅಗತ್ಯವಿದೆ’ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರೆ ಮಾರ್ಗರೇಟ್‌ ಮ್ಯಾಕ್ಲಿಯೋಡ್‌ ಗುರುವಾರ ಹೇಳಿದರು. 

ADVERTISEMENT

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು ‘ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಆ ದೇಶದ ಕುರಿತ ವರದಿಗಳನ್ನು ಪರಿಗಣಿಸುತ್ತಿದ್ದೇವೆ. ಎಲ್ಲರೂ ಅವರವರ ಧರ್ಮ ಮತ್ತು ನಂಬಿಕೆಗೆ ಅನುಗುಣವಾಗಿ ಬದುಕಬೇಕೆಂದು ನಾವು ನಿರೀಕ್ಷಿಸುತ್ತೇವೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.