ADVERTISEMENT

ಕೊರೊನಾ ವೈರಸ್‌ ಹೊಸ ಸ್ವರೂಪದ ವಿರುದ್ಧವೂ ಫೈಜರ್, ಮಾಡರ್ನಾ ಲಸಿಕೆ ಪರೀಕ್ಷೆ: ವರದಿ

ರಾಯಿಟರ್ಸ್
Published 22 ಡಿಸೆಂಬರ್ 2020, 14:23 IST
Last Updated 22 ಡಿಸೆಂಬರ್ 2020, 14:23 IST
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)
ಸಾಂದರ್ಭಿಕ ಚಿತ್ರ (ಕೃಪೆ: ಐಸ್ಟಾಕ್)   

ಲಂಡನ್: ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಕೊರೊನಾ ವೈರಸ್‌ನ ಹೊಸ ಸ್ವರೂಪದ ವಿರುದ್ಧವೂ ಈಗಾಗಲೇ ಅಭಿವೃದ್ಧಿಪಡಿಸಿರುವ ಲಸಿಕೆಗಳು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆಯೇ ಎಂಬುದಾಗಿ ಫೈಜರ್ ಮತ್ತು ಮಾಡರ್ನಾ ಪರೀಕ್ಷೆ ನಡೆಸುತ್ತಿವೆ ಎಂದು ‘ಸಿಎನ್‌ಎನ್‌’ ವರದಿ ಮಾಡಿದೆ.

ವೈರಸ್‌ನ ಹೊಸ ಸ್ವರೂಪಗಳ ವಿರುದ್ಧವೂ ಮಾಡರ್ನಾ ಲಸಿಕೆ ಪ್ರತಿಕಾಯಗಳನ್ನು ಸೃಷ್ಟಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಇದನ್ನು ಖಚಿತಪಡಿಸಿಕೊಳ್ಳಲು ಮುಂದಿನ ವಾರಗಳಲ್ಲಿ ಮತ್ತಷ್ಟು ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಕಂಪನಿಯ ಪ್ರಕಟಣೆ ತಿಳಿಸಿದೆ.

ಈಗಾಗಲೇ ಅಭಿವೃದ್ಧಿಪಡಿಸಿರುವ ಫೈಜರ್ ಲಸಿಕೆಯು ಬ್ರಿಟನ್‌ನಲ್ಲಿ ಕಂಡುಬಂದಿರುವ ವೈರಸ್‌ನ ಹೊಸ ಸ್ವರೂಪವನ್ನೂ ನಿಷ್ಕ್ರಿಯಗೊಳಿಸಬಹುದು. ಈಗಾಗಲೇ ಲಸಿಕೆ ಹಾಕಿಸಿಕೊಂಡಿರುವವರ ರಕ್ತದ ಮಾದರಿಗಳ ದತ್ತಾಂಶಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಫೈಜರ್ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ADVERTISEMENT

ಈ ವಿಚಾರವಾಗಿ ಫೈಜರ್ ಮತ್ತು ಮಾಡರ್ನಾ ತಕ್ಷಣ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ಬ್ರಿಟನ್‌ನಲ್ಲಿ ಕಂಡುಬಂದಿರುವ ಕೊರೊನಾ ವೈರಸ್‌ನ ಹೊಸ ಸ್ವರೂಪ ಶೇ 40ರಿಂದ 70ರಷ್ಟು ವೇಗವಾಗಿ ಹರಡುತ್ತಿದೆ ಎನ್ನಲಾಗಿದೆ.

ಈಗಾಗಲೇ ಅಭಿವೃದ್ಧಿಪಡಿಸಿರುವ ಲಸಿಕೆಗಳು ವೈರಸ್‌ನ ಹೊಸ ಸ್ವರೂಪದ ವಿರುದ್ಧ ಕಾರ್ಯನಿರ್ವಹಿಸದು ಎನ್ನಲು ಪುರಾವೆಗಳಿಲ್ಲ ಎಂದು ಈಗಾಗಲೇ ವಿಜ್ಞಾನಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.