ಭೂಕಂಪ
ಮನಿಲಾ: ದಕ್ಷಿಣ ಫಿಲಿಪ್ಪೀನ್ಸ್‌ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.6ರಷ್ಟು ತೀವ್ರತೆ ದಾಖಲಾಗಿದೆ. ಸುನಾಮಿ ಎಚ್ಚರಿಕೆ ನೀಡಿರುವ ಭೂಕಂಪವಿಜ್ಞಾನ ಸಂಸ್ಥೆ, ಕರಾವಳಿ ಪ್ರದೇಶದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದೆ.
ತಕ್ಷಣಕ್ಕೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 20 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ. ಭೂಕಂಪದ ಕೇಂದ್ರಬಿಂದುವಿನಿಂದ 300 ಕಿ.ಮೀ ವ್ಯಾಪ್ತಿಯೊಳಗಿನ ಕರಾವಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಧ್ಯಕ್ಷ ಫರ್ಡಿನಾಂಡ್ ಮಾರ್ಕೋಸ್ ಜೂನಿಯರ್, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದಿದ್ದಾರೆ.
ಇಂಡೋನೇಷ್ಯಾದ ಉತ್ತರ ಸುಲಾವೆಸಿ ಮತ್ತು ಪಪುವಾ ಪ್ರದೇಶಗಳಿಗೂ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.