ಮನಿಲಾ: ಕೆಲವು ರಾಷ್ಟ್ರಗಳ ಪ್ರವಾಸಿಗರು ಫಿಲಿಪ್ಪೀನ್ಸ್ ಪ್ರವೇಶಿಸಲುಡಿಸೆಂಬರ್ 1ರಿಂದ ಪ್ರಾಯೋಗಿಕವಾಗಿ ಅವಕಾಶ ನೀಡಲಾಗುವುದು ಎಂದು ಅಲ್ಲಿನ ಸರ್ಕಾರ ಶುಕ್ರವಾರ ಹೇಳಿದೆ.
ಕೋವಿಡ್ ಸಾಂಕ್ರಾಮಿಕದಿಂದಾಗಿ ಕುಸಿದಿರುವ ಅರ್ಥವ್ಯವಸ್ಥೆಗೆ ಪುನಶ್ಚೇತನ ನೀಡುವ ಅಂಗವಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಲಸಿಕೆ ಪಡೆದಿರುವ ಪ್ರವಾಸಿಗರು 15 ದಿನಗಳವರೆಗೆ ದೇಶದಲ್ಲಿರಲು ಅನುಮತಿ ನೀಡಲಾಗುತ್ತದೆ ಎಂದು ಅಧ್ಯಕ್ಷರ ವಕ್ತಾರ ಕಾರ್ಲೊ ನೊಗ್ರಾಲೆಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ ದಿನಗಳಲ್ಲಿ ಪ್ರವಾಸಿಗರಿಗೆ ಹೆಚ್ಚು ದಿನಗಳವರೆಗೆ ಇಲ್ಲಿರುವ ಅವಕಾಶವನ್ನು ಹಂತ ಹಂತವಾಗಿ ಕಲ್ಪಿಸಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.