ADVERTISEMENT

ಪಾಕಿಸ್ತಾನ| ಶೌಚಾಲಯವೆಂದು ಭಾವಿಸಿ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ಮಹಿಳೆ!

ಪಿಟಿಐ
Published 9 ಜೂನ್ 2019, 17:42 IST
Last Updated 9 ಜೂನ್ 2019, 17:42 IST
   

ಇಸ್ಲಾಮಾಬಾದ್‌:ಪಾಕಿಸ್ತಾನದ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ ವಿಮಾನದಲ್ಲಿ (ಪಿಐಎ) ಮಹಿಳಾ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ದ್ವಾರವನ್ನೇ ಶೌಚಾಲಯದ ಬಾಗಿಲು ಎಂದು ತೆರೆದಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಯಿತು.

ಶನಿವಾರ ಈ ವಿಮಾನಮ್ಯಾಂಚೆಸ್ಟರ್‌ನಿಂದ ಇಸ್ಲಾಮಾಬಾದ್‌ಗೆ ತೆರಳುತ್ತಿತ್ತು.

‘ಮ್ಯಾಂಚೆಸ್ಟರ್‌ ವಿಮಾನ ನಿಲ್ದಾಣದ ರನ್‌ವೇನಲ್ಲಿದ್ದ ವಿಮಾನ ಹಾರಾಟಕ್ಕೆ ಸಿದ್ಧವಾಗತೊಡಗಿತ್ತು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ತುರ್ತು ನಿರ್ಗಮನದ ಬಾಗಿಲು ತೆರೆದಿದ್ದಾರೆ. ಮಹಿಳೆಯ ಅಚಾತುರ್ಯದಿಂದ ಪಿಕೆ 702 ವಿಮಾನ ಏಳು ಗಂಟೆ ವಿಳಂಬವಾಯಿತು’ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ADVERTISEMENT

ವಿಮಾನಯಾನ ನಿಯಮಗಳ ಅನುಸಾರ ಲಗೇಜ್‌ ಸಮೇತ ಸುಮಾರು 40 ಪ್ರಯಾಣಿಕರನ್ನು ಕೆಳಗಿಳಿಸಲಾಯಿತು.ಹೋಟೆಲ್‌ನಲ್ಲಿ ಇವರಿಗೆ ತಂಗಲು ವ್ಯವಸ್ಥೆ ಮಾಡಲಾಯಿತು. ಬಳಿಕ ಇನ್ನೊಂದು ವಿಮಾನದಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರನ್‌ವೇನಲ್ಲಿ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶೌಚಾಲಯದ ಬಾಗಿಲು ಎಂದು ಭಾವಿಸಿಕೊಂಡು ತುರ್ತು ನಿರ್ಗಮನದ ಬಾಗಿಲು ತೆರೆದೆ’ ಎಂದು ಮಹಿಳೆ ತಿಳಿಸಿದ್ದಾರೆ.

ಈ ಘಟನೆ ಕುರಿತು ತನಿಖೆ ನಡೆಸುವಂತೆ ಪಿಐಎ ಮುಖ್ಯ ಕಾರ್ಯನಿರ್ವಾಹಕ ಅರ್ಷದ್‌ ಮಲ್ಲಿಕ್‌ಆದೇಶಿಸಿದ್ದಾರೆ.

ಪಾಕಿಸ್ತಾನದ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ ವಿಮಾನ ನಷ್ಟದಲ್ಲಿದೆ. ನಷ್ಟದಿಂದ ಹೊರಬರಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.