ದುಬೈ: ಇಸ್ರೇಲ್–ಹಮಾಸ್ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ದುಬೈನಲ್ಲಿ ನಡೆಯುತ್ತಿರುವ ಸಿಒಪಿ–28ರ ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯ ಸಂದರ್ಭದಲ್ಲಿ ಮೋದಿ ಹಾಗೂ ಮೊಹಮ್ಮದ್ ಬಿನ್ ಜಾಯೆದ್ ಭೇಟಿಯಾದರು. ಈ ವೇಳೆ ಉಭಯ ನಾಯಕರು ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಚರ್ಚಿಸಿದರು.
‘ನನ್ನ ಸಹೋದರ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾಗಲು ನಾನು ಯಾವಾಗಲೂ ಸಂತೋಷಪಡುತ್ತೇನೆ. ಸಿಒಪಿ–28 ಶೃಂಗ ಸಭೆಗಾಗಿ ಅವರ ಆತ್ಮೀಯ ಆತಿಥ್ಯಕ್ಕಾಗಿ ಧನ್ಯವಾದಗಳು. ಭಾರತ ಹಾಗೂ ಯುಎಇ ಸ್ನೇಹವನ್ನು ಬಲಪಡಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ' ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.