ಪ್ರಧಾನಿ ನರೇಂದ್ರ ಮೋದಿ
ಪಿಟಿಐ ಚಿತ್ರ
ನವದೆಹಲಿ: ಬೆಲ್ಜಿಯಂನ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬರ್ತ್ ದೆ ವೇವರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಭಾರತ-ಬೆಲ್ಜಿಯಂನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಲು ಮತ್ತು ಜಾಗತಿಕ ವಿಷಯಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.
ದೇಶವನ್ನು ವಿಭಜಿಸಿ, ಬೆಲ್ಜಿಯಂನ ಉತ್ತರ ಭಾಗದಲ್ಲಿರುವ, ಡಚ್ ಭಾಷೆ ಮಾತನಾಡುವ ಜನರು ಹೆಚ್ಚಿರುವ ‘ಫ್ಲಾಂಡರ್ಸ್’ಗೆ ಮತ್ತಷ್ಟು ಸ್ವಾಯತ್ತೆ ನೀಡಬೇಕು, ರಾಜ್ಯದ ಸ್ಥಾನಮಾನ ನೀಡಬೇಕೆಂದು ವೇವರ್ ಅವರು ತಮ್ಮ ಈವರೆಗಿನ ರಾಜಕೀಯ ಜೀವನದ ಉದ್ದಕ್ಕೂ ಬರ್ತ್ ದೆ ವೇವರ್ ಹೋರಾಟ ನಡೆಸಿದ್ದರು.
‘ರಾಜರಿಗೆ ನಿಷ್ಠೆಯಿಂದ ಇರುವುದಾಗಿ ಪ್ರಮಾಣ ಸ್ವೀಕರಿಸುತ್ತೇನೆ’ ಎಂದು ಅವರು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.