ನರೇಂದ್ರ ಮೋದಿ, ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಅಲ್ ಸಬಾ
(ಪಿಟಿಐ ಚಿತ್ರ)
ಕುವೈತ್: ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಕುವೈತ್‌ನ ನಾಯಕರೊಂದಿಗೆ ಇಂದು (ಭಾನುವಾರ) ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಎರಡು ದಿನಗಳ ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಕುವೈತ್ ರಾಜ ಶೇಕ್ ಮಿಶಾಲ್ ಅಲ್ ಅಹಮದ್ ಅಲ್ ಜಾಬೆರ್ ಅಲ್ ಸಬಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
ವಾಣಿಜ್ಯ, ವ್ಯಾಪಾರ, ಹೂಡಿಕೆ ಮತ್ತು ಇಂಧನ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಯತ್ತ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಕುವೈತ್‌ನ ಯುವರಾಜ ಶೇಕ್ ಸಬಾ ಅಲ್ ಖಾಲಿದ್ ಅಲ್ ಸಬಾ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಿದ್ದಾರೆ.
ರಕ್ಷಣಾ ವಲಯ, ವ್ಯಾಪಾರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರದಂದು ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದ್ದರು. ಕಾರ್ಮಿಕರ ಶಿಬಿರಕ್ಕೂ ಭೇಟಿ ನೀಡಿದ್ದರು.
ಕುವೈತ್‌ನ ಅಗ್ರ ವ್ಯಾಪಾರ ಪಾಲುದಾರ ದೇಶಗಳಲ್ಲಿ ಭಾರತ ಒಂದಾಗಿದೆ. ಕುವೈತ್‌ನಲ್ಲಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ.
43 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಕುವೈತ್‌ಗೆ ಭೇಟಿ ನೀಡಿದ್ದಾರೆ. 1981ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಇಲ್ಲಿಗೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.