ಪ್ಯಾರಿಸ್: ಡೆನ್ಮಾರ್ಕ್‌ನಲ್ಲಿ ಭಾರತ – ನಾರ್ಡಿಕ್ ದೇಶಗಳ ಶೃಂಗದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ಭೇಟಿ ನೀಡಿ, ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರನ್ನು ಭೇಟಿ ಮಾಡಿದರು.
ಈ ವೇಳೆ ಮೋದಿ ಮತ್ತು ಮ್ಯಾಕ್ರಾನ್ ಅವರು ದ್ವಿಪಕ್ಷೀಯ, ಪರಸ್ಪರ ಹಿತಾಸಕ್ತಿಗಳ ಜೊತೆಗೆ ಪ್ರಾದೇಶಿಕ ಮತ್ತು ಜಾಗತಿಕ ಬೆಳವಣಿಗೆಯ ವಿಷಯಗಳ ಕುರಿತು ಚರ್ಚೆ ನಡೆಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಕಾರ್ಯಾಲಯ, ಮೋದಿ–ಮ್ಯಾಕ್ರಾನ್ ಸಭೆಯು ಭಾರತ ಮತ್ತು ಫ್ರಾನ್ಸ್‌ನ ಸ್ನೇಹಕ್ಕೆ ಇನ್ನಷ್ಟು ವೇಗವನ್ನು ನೀಡಲಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.