ADVERTISEMENT

PM Modi In Maldives: ಮಾಲ್ದೀವ್ಸ್‌ಗೆ ಪ್ರಧಾನಿ ಮೋದಿ ಭೇಟಿ

ಪಿಟಿಐ
Published 25 ಜುಲೈ 2025, 5:31 IST
Last Updated 25 ಜುಲೈ 2025, 5:31 IST
<div class="paragraphs"><p>ನರೇಂದ್ರ ಮೋದಿ</p></div>

ನರೇಂದ್ರ ಮೋದಿ

   

(ರಾಯಿಟರ್ಸ್ ಚಿತ್ರ)

ಮಾಲೆ: ಬ್ರಿಟನ್ ಬೆನ್ನಲ್ಲೇ ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಮಾಲ್ದೀವ್ಸ್‌ ಪ್ರವಾಸ ಕೈಗೊಂಡಿದ್ದಾರೆ.

ADVERTISEMENT

ಮಾಲ್ದೀವ್ಸ್‌ಗೆ ಬಂದಿಳಿದಿರುವ ಪ್ರಧಾನಿ ಮೋದಿ, ದ್ವೀಪರಾಷ್ಟ್ರದ 60ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಜು ಅವರ ವಿಶೇಷ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಭೇಟಿ ನೀಡಿದ್ದಾರೆ.

ಪ್ರಧಾನಿ ಅವರನ್ನು ಮುಯಿಜು ಬರಮಾಡಿಕೊಂಡಿದ್ದಾರೆ. ಮಕ್ಕಳು ಸಾಂಪ್ರದಾಯಿಕ ನೃತ್ಯದೊಂದಿಗೆ ಸ್ವಾಗತಿಸಿದ್ದಾರೆ.

ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೆ ಭಾರತ ಹಾಗೂ ಮಾಲ್ದೀವ್ಸ್‌ ನಡುವಣ ದ್ವಿಪಕ್ಷೀಯ ಬಾಂಧವ್ಯಕ್ಕೆ ಹೊಸ ತಿರುವು ಪಡೆದುಕೊಳ್ಳುವ ನಿರೀಕ್ಷೆಯಿದೆ.

ಜುಲೈ 26ರಂದು ನಡೆಯಲಿರುವ ಮಾಲ್ದೀವ್ಸ್‌ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿರುವ ಪ್ರಧಾನಿ ಮೋದಿ ಗೌರವ ವಂದನೆಯನ್ನು ಸ್ವೀಕರಿಸಲಿದ್ದಾರೆ. ಅಲ್ಲದೆ ಮಾಲ್ದೀವ್ಸ್‌ನಲ್ಲಿ ಭಾರತದ ಸಹಾಯದೊಂದಿಗೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

'ಸಮಗ್ರ ಆರ್ಥಿಕ, ಸಾಗರ ಭದ್ರತೆಯ ದೂರದೃಷ್ಟಿ ಮತ್ತು ಹಿಂದೂ ಮಹಾಸಾಗರ ಪ್ರದೇಶದಲ್ಲಿ ಶಾಂತಿ, ಸಮೃದ್ಧಿ, ಸ್ಥಿರತೆಗಾಗಿ ನಮ್ಮ ಸಹಕಾರವನ್ನು ಬಲಪಡಿಸಲು ಮೊಹಮ್ಮದ್ ಮುಯಿಜು ಮತ್ತು ಇತರೆ ನಾಯಕರೊಂದಿಗಿನ ಮಾತುಕತೆಯನ್ನು ಎದುರು ನೋಡುತ್ತಿದ್ದೇನೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮೋದಿ ಅವರ ಬ್ರಿಟನ್ ಭೇಟಿಯ ಸಂದರ್ಭದಲ್ಲಿ, ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.