ADVERTISEMENT

ಅಮೆರಿಕ ಮಾಜಿ ಅಧ್ಯಕ್ಷ ಒಬಾಮ ಶೀಘ್ರ ಗುಣಮುಖರಾಗಲಿ: ಪ್ರಧಾನಿ ಮೋದಿ ಟ್ವೀಟ್‌

ಐಎಎನ್ಎಸ್
Published 14 ಮಾರ್ಚ್ 2022, 5:46 IST
Last Updated 14 ಮಾರ್ಚ್ 2022, 5:46 IST
   

ನವದೆಹಲಿ: ಕೊರೊನಾ ವೈರಸ್‌ ಸೋಂಕಿಗೆಗೆ ಒಳಗಾಗಿರುವ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಭಾನುವಾರ ರಾತ್ರಿ ಟ್ವೀಟ್‌ ಮಾಡಿದ್ದ ಒರಾಕ್‌ ಒಬಾಮಾ, ‘ನನಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಕಳೆದೆರಡು ದಿನಗಳಿಂದ ಗಂಟಲು ಕೆರೆತವಿದೆ. ಅದನ್ನು ಹೊರತುಪಡಿಸಿದರೆ ನಾನು ಆರಾಮವಾಗಿದ್ದೇನೆ. ನಾನು ಮತ್ತು ಮಿಶೆಲ್ ಲಸಿಕೆ ಹಾಕಿಸಿಕೊಂಡಿದ್ದೇವೆ. ಬೂಸ್ಟರ್‌ ಅನ್ನೂ ಪಡೆದುಕೊಂಡಿದ್ದೇವೆ. ಇದಕ್ಕಾಗಿ ಧನ್ಯವಾದಗಳು. ಇನ್ನು, ಮಿಶೆಲ್‌ಗೆ ಕೋವಿಡ್‌ ನೆಗೆಟಿವ್‌ ಬಂದಿದೆ’ ಎಂದು ಹೇಳಿದ್ದರು.

ಈ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಮೋದಿ, ‘ಬರಾಕ್ ಒಬಾಮಾ ಅವರು ಕೋವಿಡ್-19 ನಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ. ನಿಮ್ಮ ಕುಟುಂಬದ ಉತ್ತಮ ಆರೋಗ್ಯ ಮತ್ತು ಕ್ಷೇಮಕ್ಕಾಗಿ ನಾನು ಹಾರೈಸುತ್ತೇನೆ’ ಎಂದು ಅವರು ಬರೆದುಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.