ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಮತ್ತು ಪ್ರಧಾನಿ ನರೇಂದ್ರ ಮೋದಿ
–ರಾಯಿಟರ್ಸ್ ಚಿತ್ರ
ಪ್ಯಾರಿಸ್: ದಕ್ಷಿಣ ಫ್ರಾನ್ಸ್‌ನ ಬಂದರು ನಗರಿ ‘ಮಾರ್ಸೆಲ್ಲೆ’ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವ ಪ್ರತಿಪಾದಕ ವಿ.ಡಿ. ಸಾವರ್ಕರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.
ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾರ್ಸೆಲ್ಲೆಗೆ ಬಂದಿದ್ದೇನೆ. ಭಾರತದ ಸ್ವಾತಂತ್ರ್ಯದ ಅನ್ವೇಷಣೆಯಲ್ಲಿ ಈ ನಗರವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಇಲ್ಲಿಯೇ ಮಹಾನ್ ವೀರ್ ಸಾವರ್ಕರ್ ಅವರು ಧೈರ್ಯವಾಗಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು’ ಎಂದು ತಿಳಿಸಿದ್ದಾರೆ.
‘ಸಾವರ್ಕರ್ ಅವರನ್ನು ಬ್ರಿಟಿಷ್ ಕಸ್ಟಡಿಗೆ ಹಸ್ತಾಂತರಿಸಬಾರದು ಎಂದು ಒತ್ತಾಯಿಸಿದ ಮಾರ್ಸೆಲ್ಲೆಯ ಜನರು ಮತ್ತು ಆ ಕಾಲದ ಫ್ರೆಂಚ್ ಕಾರ್ಯಕರ್ತರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವೀರ್ ಸಾವರ್ಕರ್ ಅವರ ಶೌರ್ಯವು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ’ ಎಂದು ಮೋದಿ ಹೇಳಿದ್ದಾರೆ.
ನರೇಂದ್ರ ಮೋದಿ ಅವರು ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು.
ಪ್ಯಾರಿಸ್‌ನಲ್ಲಿ ಮಂಗಳವಾರ ನಡೆದ ‘ಎಐ ಆ್ಯಕ್ಷನ್’ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಅವರೊಂದಿಗೆ ಸಹ ಅಧ್ಯಕ್ಷತೆ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.