ADVERTISEMENT

International Yoga Day: ಮೋದಿ ನೇತೃತ್ವದಲ್ಲಿ ಯೋಗ ಕಾರ್ಯಕ್ರಮಕ್ಕೆ ಕ್ಷಣಗಣನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜೂನ್ 2023, 12:33 IST
Last Updated 21 ಜೂನ್ 2023, 12:33 IST
   

ನ್ಯೂಯಾರ್ಕ್‌: ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಕ್ಷಣಗಣನೆ ಆರಂಭವಾಗಿದೆ.

ಯೋಗ ದಿನಾಚರಣೆಯ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸಿಕೊಂಡಿದ್ದು, 180ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಸದ್ಯ ಮೋದಿ ಅವರು ವಿಶ್ವಸಂಸ್ಥೆಯ ಕೇಂದ್ರ ಕಚೇರಿ ಆವರಣಕ್ಕೆ ಆಗಮಿಸಿದ್ದಾರೆ.

ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಎಲ್ಲ ಸಿದ್ಧತೆ ನಡೆದಿದೆ ಎಂದು ಪ್ರಧಾನಮಂತ್ರಿಯವರ ಕಚೇರಿ ಟ್ವೀಟ್‌ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.