ADVERTISEMENT

ಗೂಗಲ್ CEO ಸುಂದರ್ ಪಿಚೈ ಭೇಟಿಯಾದ ಮೋದಿ: ಭಾರತದ ಡಿಜಿಟಲ್ ರೂಪಾಂತರ ಕುರಿತು ಚರ್ಚೆ

ಪಿಟಿಐ
Published 12 ಫೆಬ್ರುವರಿ 2025, 6:47 IST
Last Updated 12 ಫೆಬ್ರುವರಿ 2025, 6:47 IST
<div class="paragraphs"><p>ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು&nbsp;ಪ್ರಧಾನಿ ನರೇಂದ್ರ ಮೋದಿ</p></div>

ಗೂಗಲ್ ಸಿಇಒ ಸುಂದರ್ ಪಿಚೈ ಮತ್ತು ಪ್ರಧಾನಿ ನರೇಂದ್ರ ಮೋದಿ

   

ಪ್ಯಾರಿಸ್: ಪ್ರಧಾನಿ ನರೇಂದ್ರ ಮೋದಿ ಅವರು ಗೂಗಲ್ ಸಿಇಒ ಸುಂದರ್ ಪಿಚೈ ಅವರನ್ನು ಭೇಟಿಯಾಗಿದ್ದು, ಭಾರತದ ಡಿಜಿಟಲ್ ರೂಪಾಂತರ ಕುರಿತು ಚರ್ಚೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ಯಾರಿಸ್‌ನಲ್ಲಿ ಮಂಗಳವಾರ ನಡೆದ ‘ಎಐ ಆ್ಯಕ್ಷನ್‌’ ಶೃಂಗಸಭೆಯ ವೇಳೆ ನರೇಂದ್ರ ಮೋದಿ ಅವರು ಸುಂದರ್ ಪಿಚೈ ಅವರನ್ನು ಭೇಟಿಯಾಗಿದ್ದಾರೆ. ಕೃತಕ ಬುದ್ಧಿಮತ್ತೆಯ (ಎಐ) ನಿರ್ವಹಣಾ ವ್ಯವಸ್ಥೆಯಿಂದ ಭಾರತಕ್ಕೆ ಆಗಬಹುದಾದ ಅನುಕೂಲಗಳ ಬಗ್ಗೆ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ.

ADVERTISEMENT

‘ಪ್ಯಾರಿಸ್‌ನಲ್ಲಿ ನಡೆದ ‘ಎಐ ಆ್ಯಕ್ಷನ್‌’ ಶೃಂಗಸಭೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವುದು ಸಂತೋಷವಾಗಿದೆ. ಕೃತಕ ಬುದ್ಧಿಮತ್ತೆಯಿಂದ (ಎಐ) ಭಾರತಕ್ಕೆ ಆಗುವಂತಹ ಪ್ರಯೋಜನ ಮತ್ತು ಭಾರತದ ಡಿಜಿಟಲ್ ರೂಪಾಂತರದಲ್ಲಿ ನಾವು ಒಟ್ಟಿಗೆ ಕೆಲಸ ಮಾಡುವ ವಿಧಾನಗಳ ಬಗ್ಗೆ ಚರ್ಚಿಸಿದ್ದೇವೆ’ ಎಂದು ಪಿಚೈ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ನ್ಯೂಯಾರ್ಕ್‌ನಲ್ಲಿ 2024ರ ಸೆಪ್ಟೆಂಬರ್‌ನಲ್ಲಿ ಮೋದಿ ಮತ್ತು ಪಿಚೈ ನಡುವೆ ಸಭೆ ನಡೆದಿತ್ತು. ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ನೇತೃತ್ವದಲ್ಲಿ ನಡೆದ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅಮೆರಿಕಕ್ಕೆ ತೆರಳಿದ್ದರು.

ನರೇಂದ್ರ ಮೋದಿ ಅವರು ಮೂರು ದಿನಗಳ ಫ್ರಾನ್ಸ್ ಪ್ರವಾಸವನ್ನು ಕೈಗೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಫ್ರಾನ್ಸ್‌ನ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್ ಮಂಗಳವಾರ ಆತ್ಮೀಯವಾಗಿ ಬರಮಾಡಿಕೊಂಡಿದ್ದರು.

ಪ್ಯಾರಿಸ್‌ನಲ್ಲಿ ನಡೆದ ‘ಎಐ ಆ್ಯಕ್ಷನ್‌’ ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್‌ ಅಧ್ಯಕ್ಷ ಎಮಾನ್ಯುಯೆಲ್ ಮ್ಯಾಕ್ರನ್‌ ಅವರೊಂದಿಗೆ ಸಹ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.