ADVERTISEMENT

ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ನಾಗರಿಕ ಗೌರವ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2024, 10:57 IST
Last Updated 22 ಡಿಸೆಂಬರ್ 2024, 10:57 IST
<div class="paragraphs"><p>ಕುವೈತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೈತ್‌ನ ರಾಜ ಶೇಕ್‌ ಮಿಶಾಲ್ ಅಲ್‌ ಅಹಮದ್‌ ಅಲ್‌ ಜಾಬೆರ್‌ ಸಬಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಸನ್ಮಾನಿಸಿದರು.</p></div>

ಕುವೈತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೈತ್‌ನ ರಾಜ ಶೇಕ್‌ ಮಿಶಾಲ್ ಅಲ್‌ ಅಹಮದ್‌ ಅಲ್‌ ಜಾಬೆರ್‌ ಸಬಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಸನ್ಮಾನಿಸಿದರು.

   

Credit: X/@DDNewsLive

ಕುವೈತ್‌ ಸಿಟಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಅನ್ನು ನೀಡಿ ಗೌರವಿಸಲಾಗಿದೆ. ಇದು ಮೋದಿ ಅವರಿಗೆ ದೊರೆತ 20ನೇ ಅಂತರರಾಷ್ಟ್ರೀಯ ಗೌರವವಾಗಿದೆ.

ADVERTISEMENT

ಕುವೈತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುವೈತ್‌ನ ರಾಜ ಶೇಕ್‌ ಮಿಶಾಲ್ ಅಲ್‌ ಅಹಮದ್‌ ಅಲ್‌ ಜಾಬೆರ್‌ ಸಬಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಸನ್ಮಾನಿಸಿದ್ದಾರೆ.

‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಗೌರವವನ್ನು ವಿದೇಶಿ ಗಣ್ಯರಿಗೆ ಮತ್ತು ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ ಅಮೆರಿಕದ ಮಾಜಿ ಅಧ್ಯಕ್ಷರಾದ ಬಿಲ್ ಕ್ಲಿಂಟನ್, ಜಾರ್ಜ್ ಬುಷ್, ಬ್ರಿಟನ್‌ನ ರಾಜಕುಮಾರ ಚಾರ್ಲ್ಸ್ ಸೇರಿದಂತೆ ಇತರೆ ವಿದೇಶಿ ನಾಯಕರಿಗೆ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವಿಸಲಾಗಿತ್ತು.

ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಕುವೈತ್‌ಗೆ ಬಂದಿಳಿದ್ದಾರೆ. ಶನಿವಾರ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮೋದಿ ಮಾತನಾಡಿದ್ದರು. ಕಾರ್ಮಿಕರ ಶಿಬಿರಕ್ಕೂ ಭೇಟಿ ನೀಡಿದ್ದರು.

ಮೋದಿ ಅವರು ಇಂದು (ಭಾನುವಾರ) ಕುವೈತ್ ರಾಜ ಶೇಕ್‌ ಮಿಶಾಲ್ ಅಲ್‌ ಅಹಮದ್‌ ಅಲ್‌ ಜಾಬೆರ್‌ ಅಲ್ ಸಬಾ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.