ADVERTISEMENT

ಜೋರ್ಡಾನ್‌ ರಾಜ ಅಬ್ದುಲ್ಲಾ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಪಿಟಿಐ
Published 23 ಅಕ್ಟೋಬರ್ 2023, 14:50 IST
Last Updated 23 ಅಕ್ಟೋಬರ್ 2023, 14:50 IST
<div class="paragraphs"><p>ಪ್ರಧಾನಿ ಮೋದಿ</p></div>

ಪ್ರಧಾನಿ ಮೋದಿ

   

ನವದೆಹಲಿ: ಇಸ್ರೇಲ್-ಹಮಾಸ್ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಜೋರ್ಡಾನ್‌ನ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ಉಭಯ ನಾಯಕರು ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಯ ಬಗ್ಗೆ ಕಳವಳ ಹಂಚಿಕೊಂಡಿದ್ದಾರೆ.

ADVERTISEMENT

ಈ ಬಗ್ಗೆ ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ಜೋರ್ಡಾನ್‌ನ ಮೆಜೆಸ್ಟಿ @KingAbdullahII ಅವರೊಂದಿಗೆ ಮಾತನಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಬೆಳವಣಿಗೆಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡೆವು. ಭಯೋತ್ಪಾದನೆ, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿಗೆ ಸಂಬಂಧಿಸಿದ ಕಳವಳಗಳನ್ನು ಹಂಚಿಕೊಂಡೆವು. ಭದ್ರತೆ ಮತ್ತು ಮಾನವೀಯ ಪರಿಸ್ಥಿತಿಯ ಶೀಘ್ರ ಪರಿಹಾರಕ್ಕಾಗಿ ಸಂಘಟಿತ ಪ್ರಯತ್ನಗಳು ಅಗತ್ಯವಿದೆ' ಎಂದು ಸಂಭಾಷಣೆಯ ಕುರಿತು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.