ಇಸ್ಲಾಮಾಬಾದ್: ಭಾರತದೊಂದಿಗಿನ ಇತ್ತೀಚಿನ ಸಂಘರ್ಷದ ಸಮಯದಲ್ಲಿ ಅಣ್ವಸ್ತ್ರ ಪ್ರಯೋಗದ ಸಾಧ್ಯತೆಯನ್ನು ತಳ್ಳಿಹಾಕಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್, ದೇಶದ ಪರಮಾಣು ಕಾರ್ಯಕ್ರಮವು ಕೇವಲ ‘ಶಾಂತಿಯುತ ಚಟುವಟಿಕೆಗಳು ಮತ್ತು ಆತ್ಮರಕ್ಷಣೆಗಾಗಿ ಮಾತ್ರ’ಎಂದು ಹೇಳಿದ್ದಾರೆ.
ಇಲ್ಲಿ ಪಾಕಿಸ್ತಾನಿ ವಿದ್ಯಾರ್ಥಿಗಳ ಸಮೂಹವನ್ನು ಉದ್ದೇಶಿಸಿ ಮಾತನಾಡಿದ ಷರೀಫ್ ಈ ಹೇಳಿಕೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ನಾಲ್ಕು ದಿನಗಳ ಮಿಲಿಟರಿ ಸಂಘರ್ಷ ನೆನಪಿಸಿಕೊಂಡ ಷರೀಫ್, ಭಾರತದ ಮಿಲಿಟರಿ ದಾಳಿಯ ಸಮಯದಲ್ಲಿ 55 ಪಾಕಿಸ್ತಾನಿಗಳು ಸಾವಿಗೀಡಾಗಿದ್ದಾರೆ ಎಂದು ಹೇಳಿದ್ದಾರೆ. ಅದಕ್ಕೆ ಪಾಕಿಸ್ತಾನವು ಪೂರ್ಣ ಶಕ್ತಿಯಿಂದ ಪ್ರತಿಕ್ರಿಯೆಸಿದೆ ಎಂದಿದ್ದಾರೆ.
ಆ ಸಂದರ್ಭ ಅಣ್ವಸ್ತ್ರ ಪ್ರಯೋಗಿಸುವ ಸಾಧ್ಯತೆ ಇತ್ತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಾಕಿಸ್ತಾನದ ಅಣ್ವಸ್ತ್ರಗಳು ಶಾಂತಿಯುತ ಚಟುವಟಿಕೆಗಳು, ರಾಷ್ಟ್ರೀಯ ಭದ್ರತೆಗೆ ಮಾತ್ರ. ಆಕ್ರಮಣ ಮಾಡಲು ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟ ಬಳಿಕ ಭಾರತವು ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಆರಂಭಿಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ದಾಳಿಗೆ ಮುಂದಾದಾಗ ಭಾರತ ವೈಮಾನಿಕ ದಾಳಿ ಮೂಲಕ ಪಾಕ್‌ನ ಹಲವು ವಾಯುನೆಲೆಗಳನ್ನು ಧ್ವಂಸಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.