ಇಸ್ಲಾಮಾಬಾದ್: ಭಾರತದ ಪಡೆಗಳು ನಡೆಸಿರುವ ‘ಅಪ್ರಚೋದಿತ ದಾಳಿ’ಯನ್ನು ‘ಯುದ್ಧಕ್ಕೆ ಸಮನಾದ ಕೃತ್ಯ’ ಎಂದು ಪಾಕಿಸ್ತಾನ ಬುಧವಾರ ಹೇಳಿದೆ.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತದ ಪಡೆಗಳು ದಾಳಿ ನಡೆಸಿದ ಬೆನ್ನಲ್ಲೇ ರಾಷ್ಟ್ರೀಯ ಭದ್ರತಾ ಪರಿಷತ್ತಿನ (ಎನ್‌ಎಸ್‌ಸಿ) ಸಭೆ ನಡೆಸಿದ ಪ್ರಧಾನಿ ಶೆಹಬಾಜ್ ಶರೀಫ್, ಈ ಮಾತು ಹೇಳಿದ್ದಾರೆ.
‘ಭಾರತ ನಡೆಸಿರುವ ಈ ಅಪ್ರಚೋದಿತ ಮತ್ತು ಕಾನೂನುಬಾಹಿರ ಕೃತ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು. ಪ್ರತೀಕಾರದ ಹಕ್ಕನ್ನು ಪಾಕಿಸ್ತಾನ ಹೊಂದಿದೆ. ಈ ಕುರಿತು ಕ್ರಮ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಸೇನೆಗೆ ನೀಡಲಾಗಿದೆ‘ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.