ADVERTISEMENT

ಪಾಕ್‌: ಜೈಲುಶಿಕ್ಷೆ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ ಮರಿಯಂ

ಪಿಟಿಐ
Published 5 ಅಕ್ಟೋಬರ್ 2021, 15:12 IST
Last Updated 5 ಅಕ್ಟೋಬರ್ 2021, 15:12 IST
ಮರಿಯಂ ನವಾಜ್
ಮರಿಯಂ ನವಾಜ್   

ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯವು ತಮಗೆ ವಿಧಿಸಿರುವ ಒಂದು ವರ್ಷದ ಜೈಲುಶಿಕ್ಷೆ ಆದೇಶವು ದೋಷಪೂರಿತವಾಗಿದ್ದು, ಇದನ್ನು ರದ್ದುಗೊಳಿಸಬೇಕೆಂದು ಕೋರಿ ಪಾಕಿಸ್ತಾನ ಮುಸ್ಲಿಂ ಲೀಗ್– ನವಾಜ್ (ಪಿಎಂಎಲ್–ಎನ್) ಉಪಾಧ್ಯಕ್ಷೆ ಮರಿಯಂ ನವಾಜ್ ಇಸ್ಲಾಮಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಅವೆನ್‌ಫೀಲ್ಡ್ ಪ್ರಕರಣದಲ್ಲಿ ಮರಿಯಂ ವಿರುದ್ಧ ಭ್ರಷ್ಟಾಚಾರದ ಆರೋಪ ದಾಖಲಾಗಿತ್ತು. ಭ್ರಷ್ಟಾಚಾರದಿಂದ ಗಳಿಸಿದ ಹಣದಿಂದ ಅವರು ಲಂಡನ್‌ನಲ್ಲಿ ಆಸ್ತಿ ಖರೀದಿಸಿದ್ದಾರೆ ಎನ್ನುವ ಆರೋಪವೂ ಅವರ ಮೇಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT