ADVERTISEMENT

PM Modi France visit | ಪ್ರಧಾನಿ ಮೋದಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ

ಪಿಟಿಐ
Published 14 ಜುಲೈ 2023, 2:28 IST
Last Updated 14 ಜುಲೈ 2023, 2:28 IST
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ ನೀಡಲಾಯಿತು
ಟ್ವಿಟರ್‌ ಚಿತ್ರ– @MEAIndia
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ ನೀಡಲಾಯಿತು ಟ್ವಿಟರ್‌ ಚಿತ್ರ– @MEAIndia   

ಪ್ಯಾರಿಸ್‌ : ಪ್ರಧಾನಿ ನರೇಂದ್ರ ಮೋದಿಯವರಿಗೆ ಫ್ರಾನ್ಸ್‌ನ ಅತ್ಯುನ್ನತ ಗೌರವ ‘ಲೀಜನ್ ಆಫ್ ಆನರ್ ಗ್ರ್ಯಾಂಡ್ ಕ್ರಾಸ್‘ಅನ್ನು ನೀಡಿ ಗೌರವಿಸಲಾಗಿದೆ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

ಇಂದು (ಶುಕ್ರವಾರ) ನಡೆಯುವ ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯಲ್ಲಿ ಗೌರವ ಅತಿಥಿಯಾಗಿ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ.

ಈ ಬಗ್ಗೆ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗಾಚಿ ಅವರು ಮೋದಿ ಅವರಿಗೆ ನೀಡಿದ ಪ್ರಶಸ್ತಿಯ ಸಮೇತ ಫೋಟೊವನ್ನು ಟ್ವೀಟ್‌ ಮಾಡಿದ್ದಾರೆ.

ADVERTISEMENT

ಗುರುವಾರ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು ಫ್ರಾನ್ಸ್‌ನಲ್ಲಿ ಯುಪಿಐ ಬಳಕೆ ಮಾಡುವ ಒಪ್ಪಂದ ಮಾಡಿಕೊಂಡಿದ್ದಾರೆ. 

ಅಲ್ಲದೆ ಫ್ರಾನ್ಸ್‌ನ ಮಾರ್ಸೆಲ್ಲೆಯಲ್ಲಿ ಹೊಸ ಭಾರತೀಯ ದೂತಾವಾಸ ಕಚೇರಿಯನ್ನು ತೆರೆಯುವುದಾಗಿ ಘೋಷಿಸಿದರು. ಜತೆಗೆ ಐರೋಪ್ಯ ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳು ಈಗ ಐದು ವರ್ಷಗಳ ಅವಧಿಯ ನಂತರದ ಕೆಲಸದ ವೀಸಾಗಳನ್ನು ಪಡೆಯುತ್ತಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.