ವೊಲೊಡಿಮಿರ್ ಝೆಲೆನ್‌ಸ್ಕಿ
ವಾರ್ಸಾ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರ ಹತ್ಯೆ ಯತ್ನಕ್ಕೆ ಸಂಚು ರೂಪಿಸಲು ರಷ್ಯಾದ ವಿದೇಶಿ ಗುಪ್ತಚರ ಸಂಸ್ಥೆಗೆ ಸಹಾಯ ಮಾಡಿದ ಪೋಲೆಂಡ್ ವ್ಯಕ್ತಿಯೊಬ್ಬನ ವಿರುದ್ಧ ಇಲ್ಲಿನ ಅಧಿಕಾರಿಗಳು ದೋಷಾರೋಪ ಹೊರಿಸಿದ್ದಾರೆ ಎಂದು ಮಂಗಳವಾರ ಪ್ರಾಸಿಕ್ಯೂಟರ್‌ಗಳು ತಿಳಿಸಿದ್ದಾರೆ.
ಸಂಚಿನ ಭಾಗವಾಗಿದ್ದ ವ್ಯಕ್ತಿಯನ್ನು ಪಾವೆಲ್ ಕೆ. ಎಂದು ಗುರುತಿಸಲಾಗಿದ್ದು, ಪೋಲೆಂಡ್ ಮತ್ತು ಉಕ್ರೇನ್ ಪ್ರಾಸಿಕ್ಯೂಟರ್‌ಗಳ ಸಹಕಾರದೊಂದಿಗೆ ಈತನನ್ನು 2024ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ಬಂಧಿತನಿಗೆ 8 ವರ್ಷ ಜೈಲು ಶಿಕ್ಷೆ ವಿಧಿಸುವ ಅವಕಾಶಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.