ADVERTISEMENT

ಜಪಾನ್‌ ಕರಾವಳಿಯಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 12:53 IST
Last Updated 9 ನವೆಂಬರ್ 2025, 12:53 IST
ಸುನಾಮಿ ತೀವ್ರತೆ ಹೆಚ್ಚಿಸಿದ್ದ ಹಿಮಾಲಯದ ಕೆಸರು!
ಸುನಾಮಿ ತೀವ್ರತೆ ಹೆಚ್ಚಿಸಿದ್ದ ಹಿಮಾಲಯದ ಕೆಸರು!   

ಟೋಕಿಯೊ: ಉತ್ತರ ಜಪಾನ್‌ನಲ್ಲಿ ಭಾನುವಾರ ಸಂಜೆ ಪ್ರಬಲ ಭೂಕಂಪನ ಸಂಭವಿಸಿದ್ದು, ಬಳಿಕ ಹಲವು ಬಾರಿ ಭೂಮಿ ಕಂಪಿಸಿದೆ ಎಂದು ಜಪಾನ್‌ ಹವಾಮಾನ ಇಲಾಖೆ ತಿಳಿಸಿದೆ. ಸುನಾಮಿ ಸಂಭವಿಸುವ ಸಾಧ್ಯತೆ ಇದೆ ಎಂದು ಅದು ಎಚ್ಚರಿಸಿದೆ. 

ಮೊದಲಿಗೆ 6.7 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಇವಾಟೆ ಕರಾವಳಿಯ 10 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದೆ ಎಂದು ತಿಳಿಸಿದೆ.

ಸುನಾಮಿ ಕಾರಣ ಕರಾವಳಿ ಪ್ರದೇಶಗಳಿಂದ ದೂರ ಇರುವಂತೆ ಜನರಿಗೆ ಮುನ್ಸೂಚನೆ ನೀಡಲಾಗಿದೆ. ಈ ಪ್ರದೇಶಗಳಲ್ಲಿ ಮತ್ತೆ ಭೂಮಿ ಕಂಪಿಸುವ ಸಾಧ್ಯತೆ ಇದೆ ಎಂದೂ ಎಚ್ಚರಿಸಲಾಗಿದೆ.

ADVERTISEMENT

ಭೂಕಂಪನದಿಂದ ಉಂಟಾದ ಹಾನಿಯ ಬಗ್ಗೆ ಸದ್ಯಕ್ಕೆ ಯಾವುದೇ ವರದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.