ADVERTISEMENT

ನ್ಯೂಜಿಲ್ಯಾಂಡ್‌| ಆಳಸಮುದ್ರದಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ

ಏಜೆನ್ಸೀಸ್
Published 10 ಫೆಬ್ರುವರಿ 2021, 18:46 IST
Last Updated 10 ಫೆಬ್ರುವರಿ 2021, 18:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ವೆಲ್ಲಿಂಗ್ಟನ್‌: ಉತ್ತರ ನ್ಯೂಜಿಲ್ಯಾಂಡ್‌ ಬಳಿ ಸಮುದ್ರದ ಆಳದಲ್ಲಿ ಬುಧವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ಇದರಿಂದ ಸುನಾಮಿ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಅಮೆರಿಕದ ಜಿಯಾಲಜಿಕಲ್‌ ಏಜೆನ್ಸಿ ಎಚ್ಚರಿಸಿದೆ.

ಲಾಯಲ್ಟಿ ದ್ವೀಪಗಳ ಆಗ್ನೇಯ ಭಾಗದ ಸಮುದ್ರದಲ್ಲಿ 10 ಕಿ.ಮೀ. ಆಳದಲ್ಲಿ ಭೂಕಂಪನ ಕೇಂದ್ರ ದಾಖಲಾಗಿದ್ದು, ರಿಕ್ಟರ್‌ ಮಾಪಕದಲ್ಲಿ 7.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಏಜೆನ್ಸಿ ತಿಳಿಸಿದೆ.

ವನುವಾತು ಮತ್ತು ಫಿಜಿ ತೀರಕ್ಕೆ 1 ರಿಂದ 3.33 ಅಡಿ ಎತ್ತರದ ಸುನಾಮಿ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ ಎಂದೂ ಎಚ್ಚರಿಕೆ ನೀಡಲಾಗಿದೆ.

ADVERTISEMENT

ಇಂಡೊನೇಷ್ಯಾದಲ್ಲಿ ಭೂಕಂಪ

ಪಶ್ಚಿಮ ಇಂಡೊನೇಷ್ಯಾದ ಆಳಸಮುದ್ರದಲ್ಲಿ ಸಹ ಪ್ರಬಲ ಭೂಕಂಪನ ಸಂಭವಿಸಿದೆ. ಆದರೆ, ಸುನಾಮಿ ಅಪ್ಪಳಿಸುವ ಸಾಧ್ಯತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ.

ಸುಮಾತ್ರಾ ದ್ವೀಪದ ಬೆಂಗ್‌ಕುಲು ಪ್ರಾಂತ್ಯದ ಬೆಂಗ್‌ಕುಲು ನಗರದಿಂದ 217 ಕಿ.ಮೀ ದೂರದಲ್ಲಿ ಭೂಕಂಪನ ಕೇಂದ್ರ ಕಂಡು ಬಂದಿದೆ. ರಿಕ್ಟರ್‌ ಮಾಪಕದಲ್ಲಿ 6.2 ತೀವ್ರತೆಯ ಕಂಪನ ದಾಖಲಾಗಿದೆ ಎಂದು ಯುಎಸ್‌ ಜಿಯಾಲಜಿಕಲ್‌ ಸರ್ವೇ ತಿಳಿಸಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.