ADVERTISEMENT

ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಪಿಟಿಐ
Published 13 ಜುಲೈ 2019, 20:15 IST
Last Updated 13 ಜುಲೈ 2019, 20:15 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ವಾಷಿಂಗ್ಟನ್‌: ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ಪ್ರಧಾನಿ ಅವರ ಪ್ರವಾಸದ ಕುರಿತು ಅಧಿಕೃತ ಘೋಷಣೆ ಇನ್ನೂ ಆಗಿಲ್ಲ.

ಇದೇ ವೇಳೆ ಹ್ಯೂಸ್ಟನ್‌ನಲ್ಲಿ ಅನಿವಾಸಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.

ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡುವುದು ಇನ್ನೂ ಅಂತಿಮಗೊಂಡಿಲ್ಲ. ಆದರೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಹ್ಯೂಸ್ಟನ್‌ನಲ್ಲಿ ಸೆ.22 ರಂದು ಪ್ರಧಾನಿ ಭಾಷಣ ಆಯೋಜನೆಯಾಗುವ ಸಾಧ್ಯತೆ ಇದೆ.

ADVERTISEMENT

ಈಗಾಗಲೇ ಮೋದಿ ಅವರು ಅಮೆರಿಕದಲ್ಲಿ ಎರಡು ಬಾರಿ ಭಾರತೀಯ ಸಮುದಾಯ ಉದ್ದೇಶಿಸಿ ಮಾತನಾಡಿದ್ದಾರೆ. 2014 ರಲ್ಲಿ ಪ್ರಧಾನಿಯಾದ ನಂತರ, ನ್ಯೂಯಾರ್ಕ್‌ನ ಮ್ಯಾಡಿಸನ್‌ ಸ್ಕ್ವೇರ್‌ ಹಾಗೂ ಸಿಲಿಕಾನ್‌ ವ್ಯಾಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.