ನರೇಂದ್ರ ಮೋದಿ, ಪೆಟೊಂತಾರ್ನ್ ಶಿನೊವಾರ್ಥ್
(ರಾಯಿಟರ್ಸ್ ಚಿತ್ರ)
ಬ್ಯಾಂಕಾಕ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಇಂದು (ಗುರುವಾರ) ಥಾಯ್ಲೆಂಡ್‌ಗೆ ಬಂದಿಳಿದಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಸಮುದಾಯದವರು ಪ್ರಧಾನಿ ಮೋದಿಗೆ ಭವ್ಯ ಸ್ವಾಗತವನ್ನು ಕೋರಿದ್ದಾರೆ.
ಎರಡು ದಿನಗಳ ಥಾಯ್ಲೆಂಡ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, 6ನೇ 'ಬಂಗಾಳ ಕೊಲ್ಲಿ ಬಹುವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರ ಸಂಘಟನೆ' (ಬಿಐಎಂಎಸ್‌ಟಿಇಸಿ) ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಥಾಯ್ಲೆಂಡ್‌ನ ಪ್ರಧಾನಿ ಪೆಟೊಂತಾರ್ನ್ ಶಿನೊವಾರ್ಥ್ ಅವರನ್ನು ಭೇಟಿಯಾಗಿರುವ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಥಾಯ್ಲೆಂಡ್‌ನ ರಾಜ ಮಹಾ ವಾಜಿರಲೊಂಗ್‌ಕೋರ್ನ್ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಲಿದ್ದಾರೆ.
ಭಾರತ-ಥಾಯ್ಲೆಂಡ್ ಪಾಲುದಾರಿಕೆಗೆ ಸಂಬಂಧಿಸಿದಂತೆ ಉಭಯ ನಾಯಕರು ವಿಸೃತ ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಸಂದರ್ಭದಲ್ಲಿ 'ಥಾಯ್ ರಾಮಾಯಣ' ವಿಶೇಷ ಪ್ರದರ್ಶನವನ್ನು ಪ್ರಧಾನಿ ಮೋದಿ ವೀಕ್ಷಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, 'ರಾಮಾಯಣವು ಏಷ್ಯಾದ ಹಲವು ಭಾಗಗಳಲ್ಲಿ ಸಂಪ್ರದಾಯವನ್ನು ಸಂಪರ್ಕಿಸುತ್ತದೆ' ಎಂದು ಕೊಂಡಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.