ವಾಷಿಂಗ್ಟನ್: 9 ತಿಂಗಳ ನಂತರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಿರುವ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಗೆ ಸ್ವಾಗತಕೋರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ನುಡಿದಂತೆ ನಡೆದಿದ್ದೇವೆ ಎಂದು ಹೇಳಿದ್ದಾರೆ.
ಇಂದು ಮುಂಜಾನೆ 3.27ರ (ಭಾರತೀಯ ಕಾಲಮಾನ) ಸುಮಾರಿಗೆ ಸುನಿತಾ, ಬುಚ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಗಗನನೌಕೆಯಲ್ಲಿ ಫ್ಲೋರಿಡಾದ ಕರಾವಳಿ ತೀರದಲ್ಲಿ ಸ್ಲ್ಯಾಶ್‌ಲ್ಯಾಂಡಿಂಗ್ ಮಾಡಿದ್ದಾರೆ.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನ, ‘ನುಡಿದಂತೆ ನಡೆದಿದ್ದೇವೆ. ಒಂಬತ್ತು ತಿಂಗಳ ಕಾಲ ಬಾಹ್ಯಾಕಾಶದಲ್ಲಿ ಸಿಲುಕಿದ್ದ ಗಗನಯಾತ್ರಿಗಳನ್ನು ರಕ್ಷಿಸುವುದಾಗಿ ಅಧ್ಯಕ್ಷ ಟ್ರಂಪ್ ಪ್ರತಿಜ್ಞೆ ಮಾಡಿದ್ದರು. ಅದರಂತೆ ಇಂದು ಗಗನಯಾತ್ರಿಗಳು ಸುರಕ್ಷಿತವಾಗಿ ಅಮೆರಿಕದ ಕರಾವಳಿಯಲ್ಲಿ ಬಂದಿಳಿದಿದ್ದಾರೆ. ಎಲಾನ್ ಮಸ್ಕ್, ಸ್ಪೇಸ್‌ಎಕ್ಸ್ ಮತ್ತು ನಾಸಾಗೆ ಧನ್ಯವಾದಗಳು’ ಎಂದು ಹೇಳಿದೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಎಲಾನ್ ಮಸ್ಕ್, ನಾಸಾ, ಸ್ಪೇಸ್ಎಕ್ಸ್ ಮತ್ತು ಟ್ರಂಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.