ADVERTISEMENT

ಯೋಗ ದಿನ ಕಾರ್ಯಕ್ರಮದ ಮೇಲೆ ದಾಳಿ, ಇಸ್ಲಾಂ ನಂಬಿಕೆಗೆ ವಿರುದ್ಧವೆಂದು ಘೋಷಣೆ

ಮೆಣಸಿನ ಕಾಯಿ ಪುಡಿ, ಅಶ್ರುವಾಯು ಸಿಡಿಸಿ ಪ್ರತಿಭಟನಕಾರರ ನಿಯಂತ್ರಣ

ರಾಯಿಟರ್ಸ್
Published 21 ಜೂನ್ 2022, 14:00 IST
Last Updated 21 ಜೂನ್ 2022, 14:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಾಲೆ, ಮಾಲ್ಡೀವ್ಸ್: ಭಾರತದ ಹೈಕಮಿಷನ್ ವತಿಯಿಂದ ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಯೋಗ ದಿನಾಚರಣೆ ಕಾರ್ಯಕ್ರಮದ ಮೇಲೆ ಪ್ರತಿಭಟನಕಾರರ ಗುಂಪೊಂದು ದಾಳಿ ನಡೆಸಿದೆ. ಈ ವೇಳೆ ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಮತ್ತು ಮೆಣಸಿನಪುಡಿ ಎರಚಿದ್ದಾರೆ.

ಘಟನೆ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಭಾರತದ ರಾಜತಾಂತ್ರಿಕ ಕಚೇರಿ ವತಿಯಿಂದ ಇಲ್ಲಿನ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಯಭಾರಿ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ 150ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಆದರೆ, ಪ್ರತಿಭಟನಕಾರರ ಗುಂಪು ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಮೇಲೆ ದಾಳಿ ನಡೆಸಿದ್ದು, ಸರ್ಕಾರಿ ಆಸ್ತಿಗಳನ್ನು ಧ್ವಂಸ ಮಾಡಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಯೋಗ ಕಾರ್ಯಕ್ರಮದ ಆಯೋಜಕರೊಬ್ಬರು ಹೇಳಿದ್ದಾರೆ.

ADVERTISEMENT

ಇದಕ್ಕೂ ಮುಂಚೆ ಪ್ರತಿಭಟನಕಾರರು, ಯೋಗವು ಇಸ್ಲಾಂ ನಂಬಿಕೆಯ ವಿರುದ್ಧವಾದುದ್ದಾಗಿದೆ ಎಂಬ ಘೋಷಣಾ ಫಲಕಗಳನ್ನು ಪ್ರದರ್ಶಿಸಿದ್ದರು.

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಘಟನೆಗೆ ಕಾರಣರಾದವರನ್ನು ಕಾನೂನಿನ ಕಟ್ಟಳೆಗೆ ತರಲಾಗುತ್ತದೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ ಎಂದುಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರು ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.